ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ – ಅಧಿಕಾರ ಕಳೆದುಕೊಂಡ ಕಾಂಗ್ರೆಸ್-ಬಹುಮತ ಪಡೆದ ಬಿಜೆಪಿ- ಬಿಜೆಪಿ-11, ಕಾಂಗ್ರೆಸ್-1

0

ಕಾವು: ಫೆ.22ರಂದು ನಡೆದ ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ 12 ಸ್ಥಾನಗಳಲ್ಲಿ 11 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತದ ಸಹಕಾರ ಭಾರತಿ, 1 ರಲ್ಲಿ ಕಾಂಗ್ರೆಸ್ ಬೆಂಬಲಿತದ ರೈತಸ್ನೇಹಿ ಬಳಗದ ಅಭ್ಯರ್ಥಿ ಜಯ ಸಾಧಿಸಿದ್ದಾರೆ. ಆ ಮೂಲಕ ಆಡಳಿತಾರೂಢ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದ್ದು, ಸಹಕಾರ ಭಾರತಿಯು ಬಹುಮತದೊಂದಿಗೆ ಅಧಿಕಾರವನ್ನು ಪಡೆದುಕೊಂಡಿದೆ.
ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಸಹಕಾರ ಭಾರತಿ ಅಭ್ಯರ್ಥಿಗಳಾಗಿದ್ದ ತೀರ್ಥಾನಂದ ದುಗ್ಗಳ, ಜನಾರ್ಧನ ಗೌಡ ಪಿ, ರಾಜೇಶ್ ಗೌಡ ಕುದ್ಕುಳಿ, ಸತೀಶ್ ಪಾಂಬಾರು, ಕಾಂಗ್ರೆಸ್ ಬೆಂಬಲಿತರಾಗಿದ್ದ ಪವನ್ ದೊಡ್ಡಮನೆ, ಮಹಿಳಾ ಸ್ಥಾನದಿಂದ ಸಹಕಾರ ಭಾರತಿ ಅಭ್ಯರ್ಥಿಗಳಾಗಿದ್ದ ಜಲಜಾಕ್ಷಿ ಮಾಧವ ಗೌಡ ಕುಂಟಿಕಾನ, ಸುನಂದ ಲೋಕನಾಥ ಗೌಡ ಬಾಯಂಬಾಡಿ, ಹಿಂದುಳಿದ ವರ್ಗ ಬಿ ಸ್ಥಾನದಿಂದ ಪ್ರಭಾಕರ ರೈ ಕೊಂರ್ಬಡ್ಕ, ಹಿಂದುಳಿದ ವರ್ಗ ಎ ಸ್ಥಾನದಿಂದ ಪ್ರವೀಣ ಜಿ ಕೆ, ಪರಿಶಿಷ್ಟ ಪಂಗಡ ಸ್ಥಾನದಿಂದ ಅಣ್ಣಪ್ಪ ನಾಯ್ಕ ಬಿ, ಪರಿಶಿಷ್ಟ ಸ್ಥಾನದಿಂದ ಕರಿಯ, ಸಾಲಗಾರರಲ್ಲದ ಸ್ಥಾನದಿಂದ ಪ್ರೇಮಾ ಗಂಗಾಧರ ಗೌಡ ಕುಂಟಿಕಾನರವರು ಜಯಭೇರಿ ಬಾರಿಸಿದ್ದಾರೆ.

LEAVE A REPLY

Please enter your comment!
Please enter your name here