ಪುತ್ತೂರು: ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ತೀವ್ರ ಗಾಯಗೊಂಡ ಘಟನೆ ಫೆ.22 ರಂದು ಸಂಜೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಕಲ್ಲರ್ಪೆಯಲ್ಲಿ ನಡೆದಿದೆ.
ಪುತ್ತೂರು ಕಡೆ ಬರುತ್ತಿದ್ದ ಕಾರು ಮತ್ತು ವಿರುದ್ಧ ಧಿಕ್ಕಿನಿಂದ ಹೋಗುತ್ತಿದ್ದ ಬೈಕ್ ನಡುವೆ ಕಲ್ಲರ್ಪೆಯಲ್ಲಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಬೈಕ್ ಸವಾರನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.