ಉಪ್ಪಿನಂಗಡಿ : ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ್ ಪಾವೆಲ್ ಹಾಗೂ ಲೇಡಿ ಬೇಡನ್ ಪೊವೆಲ್ ರವರ ಜನ್ಮದಿನದ ಅಂಗವಾಗಿ ಫೆಬ್ರವರಿ 22ರಂದು ಚಿಂತನಾ ದಿನಾಚರಣೆಯನ್ನು ಆಚರಿಸಿದರು.
ಧ್ವಜಾರೋಹಣದ ಬಳಿಕ ಸ್ಕೌಟ್ ಗೈಡ್ ಮಕ್ಕಳಿಗೆ ಬೆಂಕಿ ಇಲ್ಲದೆ ಅಡುಗೆ ಹಾಗೂ ಕಬ್ಸ್ ಬುಲ್ ಬುಲ್ಸ್ಗಳಿಗೆ ಕಸದಿಂದ ರಸ ಚಟುವಟಿಕೆಯನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಪ್ಪಿನಂಗಡಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಆರ್ ವೆಂಕಟರಮಣ ಭಟ್ ಎ ಎಲ್ ಟಿ ಸ್ಕೌಟ್ ಇವರು ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನಾಡುವ ಮೂಲಕ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್ ಹಾಗೂ ಸ್ಕೌಟ್ ಗೈಡ್ಸ್ ಕಬ್ಸ್, ಬುಲ್ ಬುಲ್ ವಿಭಾಗದ ಶಿಕ್ಷಕರು ಉಪಸ್ಥಿತರಿದ್ದರು. ಸ್ಕೌಟ್ ಗೈಡ್ ವಿದ್ಯಾರ್ಥಿಗಳಾದ ನಿಷ್ಕಾ ಹೆಚ್ ಶೆಟ್ಟಿ ಚಿಂತನಾ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ಸಾನ್ವಿ ಎಸ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಕೆ ಕೃಷ್ಣಪ್ರಸಾದ್ ಪ್ರಭು ವಂದಿಸಿದರು.