ಪುತ್ತೂರು: ಬ್ರಹ್ಮರಕೂಟ್ಲು ಟೋಲ್ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಹಮ್ಮಿಕೊಂಡಿರುವ ಸಹಿ ಸಂಗ್ರಹ ಅಭಿಯಾನದ ಭಾಗವಾಗಿ ಎಸ್ಡಿಪಿಐ ಕುಂಬ್ರ ಬ್ಲಾಕ್ ಸಮಿತಿ ವತಿಯಿಂದ ಕುಂಬ್ರ ಜಂಕ್ಷನ್ನಲ್ಲಿ ಸಹಿ ಸಂಗ್ರಹ ನಡೆಸಲಾಯಿತು.
ಅಭಿಯಾನದಲ್ಲಿ ವಿದ್ಯಾರ್ಥಿಗಳು, ಲಾರಿ ಚಾಲಕರು, ರಿಕ್ಷಾ ಚಾಲಕರು ಮತ್ತು ಸಾರ್ವಜನಿಕರು ಭಾಗವಹಿಸಿ ಎಸ್ಡಿಪಿಐ ನಡೆಸುವ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಎಸ್ಡಿಪಿಐ ಕುಂಬ್ರ ಬ್ಲಾಕ್ ಅಧ್ಯಕ್ಷ ರಿಯಾಝ್ ಬಳಕ್ಕ, ಕಾರ್ಯದರ್ಶಿ ಇರ್ಷಾದ್ ಜಾರತ್ತಾರ್, ಬ್ಲಾಕ್ ಸಮಿತಿ ಸದಸ್ಯರಾದ ರಿಯಾಝ್ ಜಾರತ್ತಾರ್, ಅಶ್ರಫ್ ಪರ್ಪುಂಜ, ಎಸ್.ಎಂ ಮಹಮ್ಮದ್ ಕುಂಞಿ ಉಪಸ್ಥಿತರಿದ್ದರು.