ಪುತ್ತೂರು:ಸರಕಾರಿ ಉನ್ನತ ಹಿರಿಯ ಪ್ರಾಥಾಮಿಕ ಶಾಲೆ ಪೇರಲ್ತಡ್ಕ ಶಾಲೆಯಲ್ಲಿ ಮೆಟ್ರಿಕ್ ಮೇಳ ನಡೆಯಿತು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಶ್ರಫ್ ರೋಜಾ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ ಅಧ್ಯಕ್ಷೆ ವಿಧ್ಯಾಶ್ರೀ ಸರಳೀಕಾನ ಇವರು ಉದ್ಘಾಟಿಸಿದರು.
ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ಚಂದ್ರಶೇಖರ ರೈ ಬಾಲ್ಯೊಟ್ಟು, ಎಸ್ ಡಿ ಎಂ ಸಿ ಉಪಾಧ್ಯಕ್ಷರಾದ ತುಳಸಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರು ಜಾನಕಿ ಸ್ವಾಗತಿಸಿದರು. ಹಿರಿಯ ಪದವಿಧರ ಶಿಕ್ಷಕ ಬಾಲಕೃಷ್ಣ ವಂದಿಸಿದರು. ದೈ. ಶಿಕ್ಷಕ ಸೀತರಾಮ ಗೌಡ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿಯರಾದ ಗೀತಾ ಲೊಬೋ, ಯಶೋಧ, ಲಕ್ಷ್ಮೀದೇವಿ ಸಹಕರಿಸಿದರು.
ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು,ಸಾರ್ವಜನಿಕರು, ಉಪಸ್ಥಿತರಿದ್ದರು. ಏಳು ಕೌಂಟರ್ ಗಳಲ್ಲಿ ಮಕ್ಕಳ ಮಾರಾಟ ಮೇಳ ನಡೆಯಿತು.