ಕಡಬ: ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣಪ್ಪ ದೇವಾಡಿಗ ಸನಿಲ ಹಾಗೂ ಉಪಾಧ್ಯಕ್ಷರಾಗಿ ಚಿದಾನಂದ ಕೊಡೆಂಕಿರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ನಿರ್ದೇಶಕರುಗಳಾದ ಶಶಾಂಕ ಗೋಖಲೆ, ಜಯಚಂದ್ರ ರೈ ಕುಂಟೋಡಿ, ಶಿವಪ್ರಸಾದ್ ಪುತ್ತಿಲ, ಅಚ್ಚುತ್ತ ದೇರಾಜೆ, ಶ್ರೀಧರ ಎಸ್ ಎನ್, ಶಿವಪ್ರಸಾದ್ ಮೈಲೇರಿ, ಯೋಗೇಂದ್ರ ಕುಮಾರ್ ಬಿ ಎಸ್, ಫಕೀರ, ಲೀಲಾವತಿ ದೇವಯ್ಯ ಗೌಡ ಪನ್ಯಾಡಿ, ಶಕಿಲಾ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಪ್ರತಿನಿಧಿಯಾಗಿ ಪ್ರದೀಪ್, ವಲಯ ಮೇಲ್ವಿಚಾರಕರು, ಪಂಜ ವಲಯ ಉಪಸ್ಥಿತರಿದ್ದರು.
ಪುತ್ತೂರು ಉಪವಿಭಾಗದ ಮಾರಾಟಧಿಕಾರಿ ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿ ಶೋಭಾ ಎನ್ ಎಸ್ ಅವರು ರಿಟರ್ನಿಂಗ್ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನೆರವೇರಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಸುಂದರ ಶೆಟ್ಟಿ ಎಂ.ಕೆ ಸ್ವಾಗತಿಸಿದರು. ಸಂಘದ ಸಿಬ್ಬಂಧಿಗಳು ಸಹಕರಿಸಿದರು. ಭಾರತೀಯ ಜನತಾ ಪಕ್ಷದ ಸುಳ್ಯ ಮಂಡಲದ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಪ್ರದಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶ್ರೀಕೃಷ್ಣ ಎಂ ಆರ್, ಪುಲಸ್ತ್ಯಾ ರೈ, ಭಾಸ್ಕರ ಗೌಡ ಇಚಿಲಂಪಾಡಿ, ಸುರೇಶ್ ದೇಂತಾರು, ಲಕ್ಷ್ಮೀಶ ಬಂಗೇರ, ಕಿರಣ್ ಗೋಗಟೆ, ಅಜಿತ್ ರೈ ಆರ್ತಿಲ, ದೇವಯ್ಯ ಪನ್ಯಾಡಿ ಮುಂತಾದ ಅನೇಕ ಪ್ರಮುಖರು ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

ಪರಿಚಯ : ಕೃಷ್ಣಪ್ಪ ದೇವಾಡಿಗ ಸನಿಲ
2000ನೇ ಇಸವಿಯಿಂದ ಕುಟ್ರುಪಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು, ಒಂದು ಅವಧಿ ಉಪಾಧ್ಯಕ್ಷರಾಗಿ, ಒಂದು ಅವಧಿಗೆ ಅಧ್ಯಕ್ಷರಾಗಿ ಕಾರ‍್ಯನಿರ್ವಹಿಸಿದ್ದರು. 2015ರಿಂದ ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ಧೇಶಕರಾಗಿ ಸೇವೆ ಸಲ್ಲಿಸಿ ಇದೀಗ ಸತತ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. 2020ರಿಂದ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಮುಂದಿನ ಸಾಲಿನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಲ್ಯ ಉಮಾಮಹೇಶ್ವರಿ ದೇವಸ್ಥಾನದ ಟ್ರಸ್ಟ್‌ನ ಸದಸ್ಯರಾಗಿ, ಬಲ್ಯ ಉಮಾಮಹೇಶ್ವರಿ ಭಜನಾ ಮಂಡಳಿಯ ಸ್ಥಾಪಕ ಸದಸ್ಯರಾಗಿಯು ಸೇವೆ ಸಲ್ಲಿಸುತ್ತಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಅಧ್ಯಕ್ಷರಾಗಿ, ದೇರಾಜೆ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿರುತ್ತಾರೆ
ಚಿದಾನಂದ ಕೊಡೆಂಕಿರಿ
ಸಾಮಾಜಿಕ , ಧಾರ್ಮಿಕ ಕ್ಷೇತ್ರದಲ್ಲಿ ಸಕ್ರೀಯರಾಗಿರುವ ಚಿದಾನಂದ ಕೊಡೆಂಕಿರಿಯವರು ಕಲ್ಮಲೆ ಸಾನಿಧ್ಯ ಶ್ರೀ ಕ್ಷೇತ್ರ ಕಲ್ಮಲೆ ಇದರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ,2022ರಿಂದ ಕಾಯರಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷರಾಗಿ, ಕೊಡೆಂಕಿರಿ ಕುಟುಂಬ ಸೇವಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸುಮಾರು 16 ವರ್ಷಗಳ ಕಾಲ ಕರ್ನಾಟಕ ರಾಜ್ಯ ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಿದ್ದಾರೆ. ಕುಟ್ರುಪಾಡಿ ಗ್ರಾಮದ ಬಡಬೆಟ್ಟು ರಾಜನ್ ದೈವ ನೇಮೋತ್ಸವ ಸಮಿತಿ ಅಧ್ಯಕ್ಷರಾಗಿ, ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.