ಉಪ್ಪಿನಂಗಡಿ: ಇಲ್ಲಿನ ಪುರಾಣ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ಶ್ರೀ ದೇವರ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಸೋಮವಾರದಂದು ಶ್ರೀ ದೇವಾಲಯದಲ್ಲಿ ಗಣಪತಿ ಹೋಮ, ಶತರುದ್ರಾಭಿಷೇಕ, ಸೀಯಾಳಾಭಿಷೇಕ, ಚಂಡಿಕಾ ಹೋಮ ನೂರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.
ದೇವಳದ ತಂತ್ರಿಗಳಾದ ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಈ ಪ್ರತಿಷ್ಠಾ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಮಧ್ಯಾಹ್ನ ಮಹಾಪೂಜೆಯಾಗಿ ಅನ್ನಸಂತರ್ಪಣೆ ನಡೆಯಿತು.
ಕಾರ್ಯಕ್ರಮದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ರಾಧಾಕೃಷ್ಣ ನಾಯ್ಕ್, ಕಾರ್ಯನಿರ್ವಹಣಾಧಿಕಾರಿ ಚೆನ್ನಪ್ಪ ಗೌಡ, ದೇವಾಲಯದ ಪ್ರಧಾನ ಅರ್ಚಕ ಹರೀಶ್ ಉಪಾಧ್ಯಾಯ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸೋಮನಾಥ, ಬಿ ಗೋಪಾಲಕೃಷ್ಣ ರೈ, ಶ್ರೀಮತಿ ಡಾ. ರಮ್ಯ ರಾಜಾರಾಮ್, ಜಿ ಕೃಷ್ಣ ರಾವ್ ಅರ್ತಿಲ, ಶ್ರೀಮತಿ ಅನಿತಾ ಕೇಶವ ಗೌಡ, ದೇವಿದಾಸ್ ಬಿ ರೈ, ಎಂ. ವೆಂಕಪ್ಪ ಪೂಜಾರಿ, ಪ್ರಮುಖರಾದ ಸಂಜೀವ ಗಾಣಿಗ, ಹರಿರಾಮಚಂದ್ರ, ಕಂಗ್ವೆ ವಿಶ್ವನಾಥ ಶೆಟ್ಟಿ , ಹರೀಶ್ ನಾಯಕ್ ನಟ್ಟಿಬೈಲ್, ಸ್ವರ್ಣೇಶ್, ಅಶೋಕ್ ಕುಮಾರ್ ರೈ, ಐ. ಚಿದಾನಂದ ನಾಯಕ್ ಮತ್ತಿತರರು ಉಪಸ್ಥಿತರಿದ್ದರು. ದೇವಾಲಯದ ವ್ಯವಸ್ಥಾಪಕ ವೆಂಕಟೇಶ್ ರಾವ್, ಸಿಬ್ಬಂದಿ ಕೃಷ್ಣಪ್ರಸಾದ್ ಭಟ್, ಪದ್ಮನಾಭ, ದಿವಾಕರ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸಿದರು.