ಪುತ್ತೂರು: ನಗರಸಭೆ ವ್ಯಾಪ್ತಿಯ ಪಾಂಗ್ಲಾಯಿ ತೋಟವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ಶವವೊಂದು ಪತ್ತೆಯಾದ ಬಗ್ಗೆ ಫೆ.25ರಂದು ಬೆಳಕಿಗೆ ಬಂದಿದೆ.
ಪಾಂಗ್ಲಾಯಿ ಖಾಸಗಿ ವ್ಯಕ್ತಿಯೊಬ್ಬರ ತೋಟದ ಒಳಗೆ ಪ್ಯಾಂಟ್ ಧರಿಸಿದ ವ್ಯಕ್ತಿಯ ಅಪರಿಚಿತ ಶವ ಪತ್ತೆಯಾಗಿದೆ. ಶವದ ಪಕ್ಕದಲ್ಲೇ ಅಡಿಕೆ ಮರದ ತುದಿಯ ತುಂಡೊಂದು ಮತ್ತು ಪಕ್ಕದಲ್ಲಿ ಶರ್ಟ್ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಈತನ ಬಗ್ಗೆ ಮಾಹಿತಿ ಸಿಕ್ಕಿದರೆ ಪುತ್ತೂರು ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ವಿನಂತಿಸಿದ್ದಾರೆ.