ಉಪ್ಪಿನಂಗಡಿ: ಲಾರಿ ಬೆಂಕಿಗಾಹುತಿ

0

ಉಪ್ಪಿನಂಗಡಿ: ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಲಾರಿ ಹೊತ್ತಿ ಉರಿದ ಘಟನೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿ ಘಾಟಿಯ ರಾಜಕಟ್ಟೆ ಎಂಬಲ್ಲಿ ಫೆ.25ರಂದು ರಾತ್ರಿ ಸಂಭವಿಸಿದೆ.
ಮಂಗಳೂರಿನಿಂದ ಹಾಸನ ಕಡೆಗೆ ಕಲ್ಲಿದ್ದಲ್ಲನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಳಗೆ ರಾಜಕಟ್ಟೆ ಎಂಬಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣವೆನ್ನಲಾಗಿದೆ. ಲಾರಿಯು ಭಾಗಶಃ ಸುಟ್ಟು ಹೋಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

LEAVE A REPLY

Please enter your comment!
Please enter your name here