ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದ.ಕ, ಜಿಲ್ಲಾ ಕೇಂದ್ರ ಸಹಕಾರ ಸಹಕಾರಿ ಬ್ಯಾಂಕ್, ದ.ಕ, ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ದ.ಕ, ಜಿಲ್ಲೆಯ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮಂಗಳೂರು ಎಸ್ ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ತರಬೇತಿ ಕಾರ್ಯಕ್ರಮ ದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ರವರನ್ನು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ|ಎಂ.ಎನ್, ರಾಜೇಂದ್ರ ಕುಮಾರ್ ರವರು ಸನ್ಮಾನಿಸಿ, ಗೌರವಿಸಿದರು. ಬ್ಯಾಂಕಿನ ನಿರ್ದೇಶಕರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.