ಪುತ್ತೂರು: ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿ ಡಾ. ಶ್ರೀಪ್ರಕಾಶ್ ಬಿ. ಮಾತನಾಡಿ ಅತ್ಯುತ್ತಮವಾದ ಮತ್ತು ಸುಸಜ್ಜಿತವಾದ ವ್ಯವಸ್ಥೆಯನ್ನು ಹೊಂದಿರುವ ಶಾಲೆ ಅಂದರೆ ಸಂತ ಫಿಲೋಮಿನಾ ಪ್ರೌಢಶಾಲೆ. ನಾನು ಈ ಶಾಲೆಯಲ್ಲಿ ಕಲಿಯುತ್ತಿರುವಾಗ ಇಲ್ಲಿಯ ಅಧ್ಯಾಪಕರುಗಳು ಚೆನ್ನಾಗಿ ಕಲಿಸಿದ ಕಾರಣ ನಾನು ಇಂದು ಈ ವೃತ್ತಿಯಲ್ಲಿ ಇದ್ದೇನೆ. ಡೆನ್ನಿಸ್ ಡಿಸೋಜರವರ ಮಾರ್ಗದರ್ಶನದಿಂದ ಈ ಶಾಲೆ ಉತ್ತಮವಾಗಿ ಬೆಳೆದಿದೆ. ಅದೇ ರೀತಿಯಲ್ಲಿ ಈ ಶಾಲೆ ಕಟ್ಟಿಸಿದ ಮೊ.ಆಂಟನಿ ಪತ್ರವೊ ಹಲವು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದಾರೆ ಎಂದರು.
ಮಾಯ್ ದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ.ಫಾ| ಲಾರೆನ್ಸ್ ಮಸ್ಕರೇನಸ್ ಮಾತನಾಡಿ ಶಾಲಾ ಹಿರಿಯ ವಿದ್ಯಾರ್ಥಿ ಸಂಘ ಉತ್ತಮ ಕೆಲಸ ಮಾಡುತ್ತಿದೆ. ಶಾಲೆಯ ಎಲ್ಲಾ ಚಟುವಟಿಕೆಗಳಿಗೆ ಸಹಕಾರ ನೀಡುತ್ತಿದೆ. ಶಾಲೆಯ ಅಭಿವೃದ್ಧಿಯಲ್ಲಿ ಸಂಘ ಮುಖ್ಯ ಪಾತ್ರ ವಹಿಸಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎನ್.ಕೆ.ಜಗನ್ನಿವಾಸ್ ರಾವ್ ಮಾತನಾಡಿ ಕಳೆದ 16 ವರ್ಷಗಳಿಂದ ನಾನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ಅಂದಿನ ಮುಖ್ಯಗುರುಗಳು, ಸಂಘದ ಕಾರ್ಯದರ್ಶಿ, ಪದಾಧಿಕಾರಿಗಳು ಉತ್ತಮ ಪ್ರೋತ್ಸಾಹ, ಸಹಕಾರ ನೀಡಿದ್ದಾರೆ ಎಂದರು.
ಸನ್ಮಾನ:2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 601 ಅಂಕ ಗಳಿಸಿದ ಶಾಲಾ ವಿದ್ಯಾರ್ಥಿ ಚಿತ್ರ ಕೆ.ಪಿ.ರವರನ್ನು ಸನ್ಮಾನಿಸಯಿತು. ಮುಖ್ಯ ಅತಿಥಿ ಡಾ.ಶ್ರೀಪ್ರಕಾಶ್ ಬಿ.ರವರನ್ನು ಶಾಲು ಹೂ ಹಾರ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಶಾಶ್ವತ ಶಿಕ್ಷಣ ನಿಧಿ: ಹಿರಿಯ ವಿದ್ಯಾರ್ಥಿ ಸಂಘದಿಂದ ಶಾಲೆಯ ಬಡ ವಿದ್ಯಾರ್ಥಿಗಳಿಗೆ ನೀಡುವ ಸ್ಕಾಲರ್ಶಿಪ್ಗಾಗಿ 1 ಲಕ್ಷ ರೂ.ನ್ನು ಶಾಶ್ವತ ಶಿಕ್ಷಣ ನಿಧಿಯಾಗಿ ನೀಡಲಾಗುವುದು ಎಂದು ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಬೆನೆಟ್ ಮೊಂತೆರೊ ವಾರ್ಷಿಕ ವರದಿಯಲ್ಲಿ ತಿಳಿಸಿದರು.
ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಬೆನೆಟ್ ಮೊಂತೇರೋ ವರದಿ ಮಂಡಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ನರೇಶ್ ಲೋಬೊ ಅತಿಥಿಗಳ ಪರಿಚಯ ಮಾಡಿದರು. ಪ್ರೌಢಶಾಲಾ ಮುಖ್ಯಗುರು ವಂ. ಫಾ| ಮ್ಯಾಕ್ಸಿಂ ಡಿಸೋಜಾ ಸ್ವಾಗತಿಸಿದರು. ಶಿಕ್ಷಕಿ ವಿಲಿಯಂ ನೊರೂಂನ್ಹ ವಂದಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಜೊತೆ ಕಾರ್ಯದರ್ಶಿ ರೋಷನ್ ಸಿಕ್ವೇರಾ ಕಾರ್ಯಕ್ರಮ ನಿರೂಪಿಸಿದರು.
ನೂತನ ಅಧ್ಯಕ್ಷರ ಪದಗ್ರಹಣ
ಹಿರಿಯ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ಜಯಕುಮಾರ್ ರೈರವರಿಗೆ ಶಾಲು, ಹೂ. ಸಂಘದ ಪುಸ್ತಕ ನೀಡಿ ಅಧಿಕಾರ ಹಸ್ತಾಂತರ ಮಾಡುವ ಮೂಲಕ ಪದಗ್ರಹಣ ನಡೆಯಿತು. ಬಳಿಕ ಮಾತನಾಡಿದ ಜಯಕುಮಾರ್ ರೈರವರು ನಾನು ಕಲಿತ ಶಾಲೆಗೆ ಅಳಿಲು ಸೇವೆ ಮಾಡುವ ಅವಕಾಶ ಸಿಕ್ಕಿದೆ. ಈ ಮೂಲಕ ವಿದ್ಯಾಮಂದಿರದ ಋಣವನ್ನು ತೀರಿಸುವ ಭಾಗ್ಯ ದೊರೆತಿದೆ ಎಂದರು.