ಪುಣಚ: ಪುಣಚ ದೇವಿನಗರ ಶ್ರೀ ಮಹಮ್ಮಾಯಿ ಜೈ ಭಾರತಿ ಮರಾಟಿ ಸಂಘದ ಶ್ರೀ ಆದಿಶಕ್ತಿ ಮಹಮ್ಮಾಯಿ ಆರಾಧನಾ ಮಂದಿರದಲ್ಲಿ ಅರ್ಧಏಕಾಹ ಭಜನಾ ವಾರ್ಷಿಕೋತ್ಸವ ಹಾಗೂ ರಾತ್ರಿ ಶ್ರೀ ಮಹಮ್ಮಾಯಿ ಅಮ್ಮನವರ ಅಂಗಾರೆ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಫೆ.28ರಂದು ನಡೆಯಲಿದೆ.
ಫೆ.28ರಂದು ಬೆಳಿಗ್ಗೆ ಪುಣಚ ನಾರಾಯಣ ಬನ್ನಿಂತಾಯರ ಪೌರೋಹಿತ್ಯದಲ್ಲಿ ಮಹಾಗಣಪತಿ ಹೋಮ ನಡೆಯಲಿದೆ. ಕನ್ಯಾನ ಮಂಡ್ಯೂರು ಸುನಿತಾ ಈಶ್ವರ ನಾಯ್ಕರವರು ದೀಪ ಬೆಳಗಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿವಿಧ ಭಜನಾ ತಂಡದವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಲಿದೆ. ರಾತ್ರಿ ಶ್ರೀ ಮಹಾಮ್ಮಾಯಿ ಅಮ್ಮನವರ ಅಂಗಾರೆ ಪೂಜೆ ನಡೆದು ಪ್ರಸಾದ ವಿತರಣೆ ನಡೆಯಲಿದೆ ಎಂದು ಶ್ರೀ ಮಹಾಮ್ಮಾಯಿ ಜೈ ಭಾರತಿ ಮರಾಟಿ ಸಂಘದ ಆಡಳಿತ ಸಮಿತಿ ಹಾಗೂ ಪೂಜಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.