ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆ ಮತ್ತು ಸಾಂಸ್ಕೃತಿಕ ವೈವಿಧ್ಯ ಮಾ.1ರಂದು ನಡೆಯಲಿದೆ.
ಬೆಳಿಗ್ಗೆ ಶಾಂತಿನಗರ ಪೂಜಾ ಮೈದಾನದ ಕಟ್ಟೆಯಲ್ಲಿ ಗಣಹೋಮ, ಸಂಜೆ ಸತ್ಯನಾರಾಯಣ ಪೂಜೆ ಜರಗಲಿದೆ. ಸತ್ಯನಾರಾಯಣ ಪೂಜೆಯ ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ, ಲಕ್ಕಿಡಿಪ್ ಡ್ರಾ ನಡೆಯಲಿದ್ದು ನಂತರ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸ್ಥಳೀಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಬಾಲಕೃಷ್ಣ ಪೂಜಾರಿ ಪೆರುವಾಯಿ ನಿರಾಲ ಸಾರಥ್ಯದ ಗಯಾಪದ ಕಲಾವಿದೆರ್ ಉಬಾರ್ ಅಭಿನಯದ ತುಳು ಚಾರಿತ್ರಿಕ ನಾಟಕ ನಾಗಮಾಣಿಕ್ಯ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.