ಪುತ್ತೂರು: ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಜಯರಾಮ ರವರು ಸುದೀರ್ಘ 37 ವರ್ಷದ ಸೇವೆಯ ಬಳಿಕ ಫೆ.28ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.
ನಿವೃತ್ತಿ ಹೊಂದಲಿರುವ ಜಯರಾಮ ರವರು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಒಂದು ವರ್ಷ, ಪೂಂಜಾಲಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂರು ವರ್ಷ, ಕಾರ್ಕಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಲ್ಕು ವರ್ಷ, ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 21 ವರ್ಷ, ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಏಳುವರೆ ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಲಿದ್ದಾರೆ. ತಮ್ಮ ಸೇವಾವಧಿಯಲ್ಲಿ ಜಯರಾಮ ರವರು ಉತ್ತಮ ಪ್ರಾಧ್ಯಾಪಕರೆಂದು ಶಿಷ್ಯರಿಂದ ಹೆಸರನ್ನು ಗಿಟ್ಟಿಸಿಕೊಂಡಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.