ಮಾ.2: ಪುಣಚ ಮಹಿಷಮರ್ದಿನಿ ದೇವಿ ಭಜನಾ ಮಂಡಳಿಯ ಭಜನಾ ವಾರ್ಷಿಕೋತ್ಸವ

0

ಪುಣಚ: ಪುಣಚ ಮಹಿಷಮರ್ದಿನಿ ದೇವಿ ಭಜನಾ ಮಂಡಳಿಯ 43ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಯವರ ಮಾರ್ಗದರ್ಶನದಲ್ಲಿ ಭಜನಾ ಕಾರ್ಯಕ್ರಮವು ಮಾ.2ರಂದು ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿದೆ.

 ಮಾ.2ರಂದು ಬೆಳಿಗ್ಗೆ ಭಜನಾ ಮಂಡಳಿಯ ಮಾಜಿ ಅಧ್ಯಕ್ಷ ಗಂಗಾಧರ ಶೆಟ್ಟಿ ಕೃಷ್ಣಮೂಲೆ ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಎಸ್.ಆರ್.ರಂಗಮೂರ್ತಿ, ಉಪಾಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ಕೋಶಾಧಿಕಾರಿ ಶಂಕರನಾರಾಯಣ ಭಟ್ ಮಲ್ಯ, ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯರು ಭಾಗವಹಿಸಲಿದ್ದಾರೆ. ಬೆಳಿಗ್ಗೆ ಮಹಾಗಣಪತಿ ಹೋಮ, ಬಳಿಕ ವಿವಿಧ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಹೂವಿನ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ.
ರಾತ್ರಿ ರಂಗಪೂಜೆ ನಡೆದು ಪ್ರಸಾದ ವಿತರಣೆ ನಡೆಯಲಿದೆ ಎಂದು ಮಹಿಷಮರ್ದಿನಿ ದೇವಿ ಭಜನಾ ಮಂಡಳಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here