ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರವನ್ನು ಮಾದೇರಿ ನಿವಾಸಿ ಗಂಗಪ್ಪ ಗೌಡ ಅವರಿಗೆ ನೀಡಿ ಗೌರವಿಸಲಾಯಿತು.
ಭಯ ಮುಕ್ತ ಸದೃಢ ಸಮಾಜದ ನಿರ್ವಹಣೆಗಾಗಿ ಪ್ರತಿದಿನ ತಮ್ಮ ನಿದ್ರೆ ಹಾಗೂ ಪ್ರಾಣದ ಹಂಗನ್ನು ತೊರೆದು ಅವರು ಕಳೆದ 50 ವರ್ಷಗಳಿಂದ ವಿವಿಧ ಸಂಸ್ಥೆ ಹಾಗೂ ಬ್ಯಾಂಕುಗಳಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸಿರುತ್ತಾರೆ. ಪ್ರಸ್ತುತ ವಿಶ್ರಾಂತ ಜೀವನ ನಡೆಸುತ್ತಿದ್ದಾರೆ. ಅವರ ಶ್ರಮವನ್ನು ಗುರುತಿಸಿ ಈ ಪುರಸ್ಕಾರ ನೀಡಿ ಗೌರವಿಸಲಾಯಿತು.
ಘಟಕಾಧ್ಯಕ್ಷ ಸುಧಾಕರ್ ಶೆಟ್ಟಿ, ಮಹಿಳಾ ಜೆಸಿ ಅಧ್ಯಕ್ಷೆ ಪ್ರವೀಣಿ ಸುಧಾಕರ್ ಶೆಟ್ಟಿ, ಜೊತೆ ಕಾರ್ಯದರ್ಶಿ ಲೀಲಾಮೋಹನ್, ಸದಸ್ಯರಾದ ಶ್ರೇಯಸ್ ಶೆಟ್ಟಿ, ಹರೀಶ್ ರೈ ಆಮುಂಜ ಉಪಸ್ಥಿತರಿದ್ದರು.