ಪುತ್ತೂರು: ಅಖಿಲ ಭಾರತ ಸಂಗೀತ ಮತ್ತು ನೃತ್ಯ ಕಲಾವಿದರ ಒಕ್ಕೂಟ ದ.ಕ. ಮತ್ತು ಉಡುಪಿ ಇದರ ವತಿಯಿಂದ ಮಹಾಶಿವರಾತ್ರಿ ಸಲುವಾಗಿ ಪುತ್ತೂರಿನ ನಟರಾಜ ವೇದಿಕೆಯಲ್ಲಿ ಬುಧವಾರ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಟ್ಟಿತು.

ಇದರಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.) ಇದರ ಕಲಾವಿದರು ‘ನೃತ್ಯೋಹಂ’ ನೃತ್ಯ ಪ್ರದರ್ಶನ ನೀಡಿದರು.
ಕಲಾ ಅಕಾಡೆಮಿಯ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ಮಾರ್ಗದರ್ಶನದಲ್ಲಿ ಭರತನಾಟ್ಯ ಪ್ರದರ್ಶನಗೊಂಡಿತು.
ಕಾರ್ಯಕ್ರಮ ಸಂಘಟಕರಾದ ಸಾಯಿನಾರಾಯಣ್ ಕಲ್ಮಡ್ಕ ಹಾಗೂ ಕೃಷ್ಣ ಗೋಪಾಲ್ ಪುಂಜಾಲಕಟ್ಟೆ ಶ್ರೀದೇವರ ಪ್ರಸಾದ ನೀಡಿ ಕಲಾವಿದರಿಗೆ ಗೌರವ ಸಲ್ಲಿಸಿದರು.