ಉಪ್ಪಿನಂಗಡಿ: ಪೊಲೀಸ್ ಇಲಾಖೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಪ್ರಸಕ್ತ ಉಪ್ಪಿನಂಗಡಿ ಪೊಲೀಸ್ ಠಾಣಾ ಸಹಾಯಕ ಪೊಲೀಸ್ ಉಪನಿರೀಕ್ಷಕ ಸುಧಾಕರ್ ಪಿ. ಫೆ.28ರಂದು ಸೇವಾ ನಿವೃತ್ತಿಯಾಗುತ್ತಿದ್ದಾರೆ.
ಮೂಲತಃ ಕಾಸರಗೋಡು ತಾಲೂಕಿನ ವರ್ಕಾಡಿ ಗ್ರಾಮದ ನಿವಾಸಿಯಾಗಿರುವ ಇವರು ಪ್ರಸಕ್ತ ಪುತ್ತೂರಿನ ಕೆಮ್ಮಾಯಿ ನಿವಾಸಿಯಾಗಿದ್ದಾರೆ. 1993 ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಇವರು ಪುತ್ತೂರು ನಗರ, ಉಪ್ಪಿನಂಗಡಿ, ಕೊಣಾಜೆ, ಪುತ್ತೂರು ಸಂಚಾರ ಠಾಣೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಹೆಡ್ ಕಾನ್ ಸ್ಟೇಬಲ್ ಆಗಿ ಪುತ್ತೂರು ಗ್ರಾಮಾಂತರ, ಉಪ್ಪಿನಂಗಡಿ ವೃತ್ತ ಕಚೇರಿ, ಬಳಿಕ ಎಎಸೈ ಆಗಿ ಪದೋನ್ನತಿ ಪಡೆದು ಬೆಳ್ಳಾರೆ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ನಾಗರಿಕ ಸಮಾಜದೊಂದಿಗೆ ಉತ್ತಮ ಭಾಂಧವ್ಯವನ್ನು ಹೊಂದಿದ್ದ ಇವರು, ಹಲವಾರು ಪ್ರಕರಣಗಳಲ್ಲಿ ತನಿಖಾ ಸಹಾಯಕರಾಗಿ ಕಾರ್ಯನಿರ್ವಹಿಸಿ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ಸುಗಳಿಸುವ ಮೂಲಕ ಇಲಾಖಾ ಘನತೆಯನ್ನು ಹೆಚ್ಚಿಸಿದ್ದಾರೆ. ಇವರು ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಹೊಂದಿದ್ದು, ಹಿರಿಯ ಪುತ್ರ ಎಂಜಿನಿಯರಿಂಗ್ ಪದವಿ ಪಡೆದು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದಾರೆ. ದ್ವಿತೀಯ ಪುತ್ರ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದಾರೆ.