ಪುತ್ತೂರು:ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಎನ್ಸಿಆರ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷರಾಗಿರುವ ಸಹಕಾರ ರತ್ನ ಡಾ|ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ದ.ಕ ಜಿಲ್ಲಾ ಸಹಕಾರಿ ಯೂನಿಯನ್ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ, ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರಿಗೆ ಪುತ್ತೂರು ಉಪವಿಭಾಗದ ವ್ಯಾಪ್ತಿಯ ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳ ಎಲ್ಲಾ ಸಹಕಾರಿ ಬಂಧುಗಳ ಅಭಿನಂದನಾ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮ ಮಾ.1ರಂದು ಕೊಂಬೆಟ್ಟು ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಕರ್ನಾಟಕ ಸರಕಾರದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಶಾಮ್ ಭಟ್ ಅಭಿನಂದಿಸಲಿದ್ದಾರೆ. ದ.ಕ ಲೋಕಸಭಾ ಮಾಜಿ ಸದಸ್ಯ ನಳಿನ್ ಕುಮಾರ್ ಕಟೀಲು ಅಭಿನಂದನಾ ಭಾಷಣ ಮಾಡಲಿದ್ದಾರೆ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಶುಭಾಶಂಸನೆಗೈಯಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಮಾಸ್ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ಅಭಿನಂದನಾ ಸಮಿತಿ ಪ್ರಕಟಣೆ ತಿಳಿಸಿದೆ.
ಸಹಕಾರಿ ಬಂಧುಗಳು ಕಾರ್ಯಕ್ರಮ ಯಶಸ್ವಿಗೊಳಿಸಿ
ಡಾ|ಎಂ.ಎನ್.ರಾಜೇಂದ್ರ ಕುಮಾರ್ರವರು ಸಹಕಾರಿಗಳ ಸಮಸ್ಯೆಗಳನ್ನು ಪರಿಹರಿಸಿ ತಾನು ಬೆಳೆಯುವದಲ್ಲದೆ ಎಲ್ಲರನ್ನು ಬೆಳೆಸುವ ಉದ್ಧೇಶದಿಂದ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ಶಶಿಕುಮಾರ್ ಬಾಲ್ಯೊಟ್ಟುರವರು ಸಹಕಾರಿಗಳಿಗೆ ಸಮೀಪದ ಸಹಕಾರಿಯಾಗಿ ಸ್ಪಂದಿಸುವ ವ್ಯಕ್ತಿಯಾಗಿದ್ದಾರೆ. ಇವರಿಬ್ಬರು ಸಹಕಾರಿ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ಇವರಿಬ್ಬರಿಗೆ ಪುತ್ತೂರು ಉಪವಿಭಾಗದ ವ್ಯಾಪ್ತಿಯ ಸಹಕಾರಿ ಬಂಧುಗಳಿಂದ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಸಹಕಾರಿ ಬಂಧುಗಳು ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ವಿನಂತಿ
ಎಸ್.ಬಿ. ಜಯರಾಮ ರೈ ಬಳೆಜ್ಜ, ಅಧ್ಯಕ್ಷರು ಅಭಿನಂದನಾ ಸಮಿತಿ