ಪುತ್ತುರು: ಆರು ತಂಡಗಳ ನಡುವಿನ ವಿದ್ಯಾರಶ್ಮಿ ಪ್ರೀಮಿಯರ್ ಲೀಗ್ 2K25 ಕ್ರಿಕೆಟ್ ಪಂದ್ಯಾಟ ಫೆ.27ರಂದು ವಿದ್ಯಾರಶ್ಮಿ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರಿಕೆಟ್ ಪಂದ್ಯಾವಳಿಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ರಶ್ಮಿ ಅಶ್ವಿನ್ ಶೆಟ್ಟಿ ಯವರು ದೀಪವನ್ನು ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು. ಮುಖ್ಯ ಅಥಿತಿ ದಕ್ಷಿಣ ಕನ್ನಡ ಯೂತ್ ಫೆಡರೇಶನ್ ಮಂಗಳೂರು ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ವಿದ್ಯಾಸಂಸ್ಥೆಗೆ ರಾಜ್ಯ ಪ್ರಶಸ್ತಿ ವಿಜೇತ ಯುವಕ ಮಂಡಲ(ರಿ) ಸವಣೂರು ಇದರ ಪರವಾಗಿ ಕ್ರೀಡಾ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿ ಪಂದ್ಯಾಟಕ್ಕೆ ಶುಭವನ್ನು ಹಾರೈಸಿದರು.
ಸಂಸ್ಥೆಯಲ್ಲಿ ಸುಮಾರು 3 ಲಕ್ಷ ವೆಚ್ಚದಲ್ಲಿ ಹೊಸದಾಗಿ ನಿರ್ಮಾಣಗೊಂಡ ಕ್ರಿಕೆಟ್ ಪಿಚ್ ಅನ್ನು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ರಾಜಲಕ್ಷ್ಮಿ ಎಸ್ ರೈ ಯವರು ತೆಂಗಿನಕಾಯಿಯನ್ನು ಒಡೆಯುವುದರ ಮೂಲಕ ಅನಾವರಣಗೊಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ, ನ್ಯಾಯವಾದಿ ಅಶ್ವಿನ್ ಎಲ್. ಶೆಟ್ಟಿ ಯವರು ಕ್ರಿಕೆಟ್ ಪಂದ್ಯಾವಳಿಗೆ ಶುಭವನ್ನು ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಪ್ರಾಂಶುಪಾಲ ಎಂ.ಶೇಷಗಿರಿ, ದೈಹಿಕ ಶಿಕ್ಷಣ ನಿರ್ದೇಶಕ ಭರತ್ ಎಂ.ಎಲ್ ಉಪಸ್ಥಿತರಿದ್ದರು.
ತೃತೀಯ ಬಿ.ಎ ವಿದ್ಯಾರ್ಥಿ ಎನ್.ಚೇತನ್ ಕುಮಾರ್ ರೈ ಸ್ವಾಗತಿಸಿ, ವಂದಿಸಿದರು.
ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ರನ್ನರ್ಸ್ ಆಗಿ V R V HUNTERS ವಿನ್ನರ್ಸ್ ಆಗಿ MARCO STRIKERS ತಂಡಗಳು ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.