ಪುತ್ತೂರು: ಇತ್ತೀಚೆಗೆ ತಾನೇ ‘ವಿಶ್ವದ ಹೆಮ್ಮೆಯ ಕನ್ನಡಿಗ’ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಗಣೇಶ್ ಕಾಸರಗೋಡು ಅವರಿಗೆ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ ಕೊಡ ಮಾಡುವ ಪ್ರತಿಷ್ಠಿತ ವಾರ್ಷಿಕ ‘ಅಪ್ಪಾಜಿ ಗೌಡ ಪ್ರಶಸ್ತಿ’ಗೆ ಇವರು ಆಯ್ಕೆಯಾಗಿದ್ದಾರೆ.
ಕೊಪ್ಪಳದಲ್ಲಿ ಮಾರ್ಚ್ 9ಕ್ಕೆ ನಡೆಯಲಿರುವ ಬೃಹತ್ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಗಣೇಶ್ ಕಾಸರಗೋಡು ಅವರಿಗೆ ನೀಡಿ ಗೌರವಿಸಲಾಗುವುದೆಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವೃತ್ತಿ ಸೇವೆ, ಸಾಮಾಜಿಕ ಬದ್ಧತೆ ಮತ್ತು ಸಾಧನೆಗಳಿಗಾಗಿ KUWJ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕಳೆದ 45 ವರ್ಷಗಳಿಂದ ಸಿನಿಮಾ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಗಣೇಶ್ ಕಾಸರಗೋಡು ಅವರು ಈಗಾಗಲೇ ಕರ್ನಾಟಕ ರಾಜ್ಯ ಸಿನಿಮಾ ಸಾಹಿತ್ಯ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡಮಿ ಪ್ರಶಸ್ತಿ, ಮಂತ್ರಾಲಯದ ವಿಜಯ ವಿಠ್ಠಲ ಪ್ರಶಸ್ತಿ, ಸಾಧನಾ ರಾಜ್ಯ ಪ್ರಶಸ್ತಿ, ಇಂಡಿವುಡ್ ಎಕ್ಸೆಲೆನ್ಸ್ ಪ್ರಶಸ್ತಿ, ಮೀಡಿಯಾ ಅಚೀವ್ಮೆನ್ಟ್ ಪ್ರಶಸ್ತಿ…ಮೊದಲಾದ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದಾರೆ.