ಪುತ್ತೂರು: ನರಿಮೊಗರು ಗ್ರಾಮದ ಮುಗೇರಡ್ಕ-ಪೊಸಮೆನ್ಪದವು ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನದಲ್ಲಿ ಕಲ್ಕುಡ ಕಲ್ಲುರ್ಟಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವವು ಮಾ.1ರಂದು ನಡೆಯಲಿದೆ.
ನೇಮೋತ್ಸವದ ಅಂಗವಾಗಿ ಬೆಳಿಗ್ಗೆ ಗಣಹೋಮ, ನಾಗತಂಬಿಲ, ಪರಿವಾರ ದೈವಗಳಿಗೆ ತಂಬಿಲ, ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ದೈವಗಳ ಭಂಡಾರ ತೆಗೆದು ಕಲ್ಕುಡ, ಕಲ್ಲುರ್ಟಿ ದೈವಗಳ ನೇಮ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನಂತರ ಬದ್ಕೆರೆ ಕಲ್ಪಿ ಖ್ಯಾತಿಯ ಸಂಸಾರ ಕಲಾವಿದೆರ್ ಪುತ್ತೂರು ಅಭಿನಯಿಸುವ ‘ಮಾರ್ನೆಮಿ’ ಎಂಬ ಹಾಸ್ಯಮಯ ನಾಟಕ ಪ್ರದರ್ಶನ ನಡೆದು ನಂತರ ಪಂಜುರ್ಲಿ ಹಾಗೂ ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.