ಪುಣಚ: ಗ್ರಾಮ ಪಂಚಾಯತ್ ಪುಣಚ ಹಾಗೂ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಪುಣಚ ಇವರ ವತಿಯಿಂದ ಪುಣಚದಲ್ಲಿ ನಿರ್ಮಾಣಗೊಂಡಿರುವ ಹಿಂದೂ ರುದ್ರಭೂಮಿ ಕಟ್ಟಡ(ಮುಕ್ತಿಧಾಮ)ವು ಮಾ.2ರಂದು ಲೋಕಾರ್ಪಣೆಗೊಳ್ಳಲಿದೆ.
ಸಂಸದ ಕ್ಯಾ.ಬ್ರಿಜೇಶ್ ಚೌಟ ಹಿಂದೂ ರುದ್ರಭೂಮಿಯ ಕಟ್ಟಡ ಲೋಕಾರ್ಪಣೆ ನೆರವೇರಿಸಲಿದ್ದಾರೆ. ಬಳಿಕ ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಕತಾರ್ ಉದ್ಯಮಿ ರವಿ ಶೆಟ್ಟಿ ಮೂಡಂಬೈಲು ದೀಪ ಪ್ರಜ್ವಲನೆ ನಡೆಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಜನಾರ್ದನ ಭಟ್ ಅಮೈ, ಪುಣಚ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ ಉಪಾಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ರಮೇಶ್, ಪುಣಚ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಂಶೀಲಾ, ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ರವಿ ಬಿ.ಕೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪುಣಚ ಗ್ರಾಮ ಪಂಚಾಯತು ಹಾಗೂ ಪುಣಚ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಪ್ರಕಟಣೆ ತಿಳಿಸಿದೆ.