ಪುತ್ತೂರು: ದ.ಕ.ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮಂಗಳೂರು ಮತ್ತು ಪುತ್ತೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಮಾ. 8ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯುವ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತದ ಪೂರ್ವಭಾವಿ ಸಭೆ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಉಷಾ ನಾಯಕ್ ನೇತ್ರತ್ವದಲ್ಲಿ ಫೆ.28 ರಂದು ಪುತ್ತೂರು ಲಯನ್ಸ್ ಕ್ಲಬ್‌ನಲ್ಲಿ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಪುತ್ತೂರು ದರ್ಬೆ ಪ್ರಶಾಂತ್ ಮಹಲ್ ಬಳಿಯ ವೃತ್ತದಿಂದ ವಿವಿಧತೆಯಲ್ಲಿ ಏಕತೆ ಎಂಬ ಧ್ಯೇಯ ವಾಕ್ಯದೊಂದಿಗೆ ಮಹಿಳಾ ವಾಹನ ಜಾಥ ನಡೆಯಲಿದೆ. ಪುತ್ತೂರು ಮಹಿಳಾ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸವಿತಾ ಇವರು ಜಾಥವನ್ನು ಉದ್ಘಾಟಿಸುವುದೆಂದು ತೀರ್ಮಾನಿಸಲಾಯಿತು. ಜಿಲ್ಲಾ ಒಕ್ಕೂಟದ ಗೌರವಾಧ್ಯಕ್ಷೆ ಚಂಚಲ,ತೇಜೋಮಯ,ಪ್ರೇಮಲತಾ ರಾವ್, ರೇಷ್ಮಾ,ರೇಖಾ ಶೆಟ್ಟಿ, ಉಮಾ ಡಿ. ಪ್ರಸನ್ನ ತಾಲೂಕು ಒಕ್ಕೂಟದ ಕಾರ್ಯದರ್ಶಿ ಪೂರ್ಣಿಮಾ ಶೆಟ್ಟಿ, ಉಷಾ ನಾಯಕ್ ಸೂಕ್ತ ಸಲಹೆ ಸೂಚನೆ ನೀಡಿದರು.
ತಾಲೂಕು ಒಕ್ಕೂಟದ ಅಧ್ಯಕ್ಷೆ ಶಾಂತಿ ಹೆಗ್ಡೆ ಪ್ರಾರ್ಥಿಸಿದರು. ಜಿಲ್ಲಾ ಒಕ್ಕೂಟದ ಕಾರ್ಯದರ್ಶಿ ರೇಷ್ಮ ವಂದಿಸಿದರು. ಮುಲ್ಕಿ ಮಂಗಳೂರು, ಉಳ್ಳಾಲ, ಬಂಟ್ವಾಳ, ಸುಳ್ಯ, ಪುತ್ತೂರು 6 ತಾಲೂಕಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.