ತುಳು ಭಾಷೆಗೆ ಪ್ರೋತ್ಸಾಹ-ರಾಮಕುಂಜದ ಕೆ.ಸೇಸಪ್ಪ ರೈಯವರಿಗೆ ಸನ್ಮಾನ

0

ರಾಮಕುಂಜ; ಅಖಿಲ ಭಾರತ ತುಳು ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರಿನ ಉರ್ವ ಸ್ಟೋರ್ ಅಂಬೇಡ್ಕರ್ ಭವನದಲ್ಲಿ ಜರಗಿದ ’ಮಾಯಿದ ಮಹಾಕೂಟ’ ಕಾರ್ಯಕ್ರಮದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸೇಸಪ್ಪ ರೈಯವರು ರಾಜ್ಯದಲ್ಲಿ ಪ್ರಥಮ ಭಾರಿಗೆ ತುಳು ಭಾಷೆಯನ್ನು ಮೂರನೇ ಭಾಷೆಯನ್ನಾಗಿ ತಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ಪರಿಚಯಿಸಿದ್ದು ಮಾತ್ರವಲ್ಲದೆ ನೇತ್ರಾವತಿ ತುಳುಕೂಟ ಸ್ಥಾಪನೆ ಮಾಡಿ ರಾಜ್ಯದ ತುಳು ಭಾಷಾ ಶಿಕ್ಷಕರಿಗೆ ವಿಶೇಷ ಕಾರ್ಯಾಗಾರ, ತುಳು ರಸ ಮಂಟಮೆ, ತುಳು ಕಲಿಕಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ತುಳುನಾಡಿನ ಹಬ್ಬ ಹರಿದಿನಗಳ ಆಚರಣೆಯ ಮೂಲಕ ತುಳು ನಾಡಿನ ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅವಿರತ ಶ್ರಮಿಸುತ್ತಿದ್ದಾರೆ. ಇವರ ಈ ಸೇವೆಯನ್ನು ಗುರುತಿಸಿ ಮಾಯಿದ ಮಹಾಕೂಟ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿದೆ.

LEAVE A REPLY

Please enter your comment!
Please enter your name here