ರಾಮಕುಂಜ: ಕೊಣಾಜೆಯಲ್ಲಿರುವ ಮಂಗಳೂರು ವಿಶ್ವ ವಿದ್ಯಾಲಯದ ಮಂಗಳ ಗಂಗೋತ್ರಿ ಸಭಾಂಗಣದಲ್ಲಿ ನಡೆದ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 27ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರೇಮಾ ಬಿ ಅವರನ್ನು ಶೈಕ್ಷಣಿಕ ವಲಯದಲ್ಲಿ ಪಠ್ಯ, ಪಠ್ಯೇತರ ಮತ್ತು ಕ್ರೀಡಾ ಸಾಧನೆಯನ್ನು ಪರಿಗಣಿಸಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.