ಪುತ್ತೂರು: ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ಗೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಮಾ.1ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಅವರಿಗೆ ದೇವಳದಲ್ಲಿ ಪ್ರಸಾದ ನೀಡಿ ಗೌರವಿಸಲಾಯಿತು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರು ಸಹಕಾರತ್ನರಿಬ್ಬರಿಗೂ ದೇವಳದ ಗೌರವ ಶಲ್ಯ ತೊಡಿಸಿದರು. ಈ ಸಂದರ್ಭದಲ್ಲಿ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಮತ್ತು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.