ಕಡಬ: ಇಲ್ಲಿನ ಶ್ರೀ ಜಯದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕುಂಭಾಭಿಷೇಕ ಏ.16ರಿಂದ ಏ.21ರವರೆಗೆ ನಡೆಯಲಿದ್ದು, ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು ಶೃಂಗೇರಿ ಮಠದಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳಾದ ಶೃಂಗೇರಿ ಮಠ ಉಡುಪಿ ಪ್ರಾಂತ್ಯದ ಧರ್ಮಾಧಿಕಾರಿ,ಬ್ರಹ್ಮಶ್ರೀ ಪಾವಂಜೆ ವಾಗೀಶ ಶಾಸ್ತ್ರಿ ಪ್ರತಿಷ್ಠಾ ಬ್ರಹ್ಮಕುಂಭಾಭಿಷೇಕ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಜಡೆಮನೆ, ಕಾರ್ಯದರ್ಶಿ ಸೋಮಪ್ಪ ನಾಯ್ಕ್, ಜತೆ ಕಾರ್ಯದರ್ಶಿ ಪ್ರಸನ್ನ ಕುಮಾರ್ ಪುತ್ರಬೈಲು, ಶೃಂಗೇರಿ ಜಗದ್ಗುರು ಅಭಿನಂದನಾ ಸಮಿತಿಯ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ಪ್ರಧಾನ ಕಾರ್ಯದರ್ಶಿ ಶ್ರೀಕೃಷ್ಣ ಎಂ.ಆರ್. ಜಯದುರ್ಗಾಪರಮೇಶ್ವರೀ ಭಜನಾ ಮಂಡಳಿಯ ಅಧ್ಯಕ್ಷೆ ಪ್ರೇಮ, ಪ್ರಮುಖರಾದ ವಾಣಿ ಅರುಣ್ ಕುಮಾರ್ ಜಡೆಮನೆ, ಸಾತ್ವಿಕ್ ಜಡೆಮನೆ, ಗಣೇಶ್ ಭಟ್ ಪಾದೆ, ಪದ್ಮನಾಭ ರಾವ್, ಪ್ರಮೋದ್ ನಂದುಗುರಿ ಹಾಗೂ ಭಜನಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.