ಬಡಗನ್ನೂರು: ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಬ್ರಿಜೇಶ್ ಚೌಟ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ರಾಧಾಕೃಷ್ಣ ರೈ ಬೂಡಿಯಾರು, ಒಳಮೂಗ್ರು ಗ್ರಾ.ಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಅರಿಯಡ್ಕ ಗ್ರಾ.ಪಂ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ನಿತೀಶ್ ಕುಮಾರ್ ಶಾಂತಿವನ ಮತ್ತಿತರ ಗಣ್ಯರು ಹಾಗೂ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಮತ್ತು ಸದಸ್ಯರು ಉಪಸ್ಥಿತರಿದ್ದರು.