ರಾಮಕುಂಜ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕ ಮತ್ತು ಶ್ರೀ ರಾಮಕಂಜೇಶ್ವರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮ ಮತ್ತು ಸಾಹಿತ್ಯ ಜಾಗೃತಿ ಕಾರ್ಯಕ್ರಮ ಮಾ.3ರಂದು ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ಅಧ್ಯಕ್ಷ ಕೆ.ಸೇಸಪ್ಪ ರೈಯವರು ಮಾತನಾಡಿ, ದತ್ತಿ ನಿಧಿಯ ಉದ್ದೇಶ ಮತ್ತು ಸದ್ಬಳಕೆ ಬಗ್ಗೆ ತಿಳಿಸಿದರು. ಕನ್ನಡ ಶಿಕ್ಷಕ ಕಿಶೋರ್ ಕುಮಾರ್ ಬಿ. ಅವರು ’ಅರಳಲಿ ಸಾಹಿತ್ಯದ ಮನಸ್ಸುಗಳು ಬೆಳಗಲಿ ಕರ್ನಾಟಕ’ ಎಂಬ ವಿಷಯದ ಬಗ್ಗೆ ಉಪನ್ಯಾಸಗೈದರು. ಮುಖ್ಯ ಅತಿಥಿಯಾಗಿದ್ದ ಶ್ರೀ ರಾಮಕುಂಜೇಶ್ವರ ಅಂಗ್ಲ ಮಾಧ್ಯಮದ ಶಾಲಾ ಆಡಳಿತ ಅಧಿಕಾರಿ ಆನಂದ್ ಎಸ್.ಟಿ. ಶುಭಹಾರೈಸಿದರು.
ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲಾ ವ್ಯವಸ್ಥಾಪಕ ರಮೇಶ್ ರೈ, ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕದ ಸದಸ್ಯರಾದ ಪ್ರೇಮ ಬಿ., ರಮ್ಯ ಉಪಸ್ಥಿತರಿದ್ದರು. ಕನ್ನಡ ಶಿಕ್ಷಕ ಹರೀಶ್ ಆಚಾರ್ಯ ಸ್ವಾಗತಿಸಿ, ನಿರೂಪಿಸಿದರು. ಘಟಕದ ಕೋಶಾಧಿಕಾರಿ ಬಾಲಚಂದ್ರ ಮುಚ್ಚಿಂತ್ತಾಯ ವಂದಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಾಹಿತ್ಯ ಅಭಿಮಾನಿಗಳು ಭಾಗವಹಿಸಿದ್ದರು.
Home ಇತ್ತೀಚಿನ ಸುದ್ದಿಗಳು ರಾಮಕುಂಜ: ಕನ್ನಡ ಸಾಹಿತ್ಯ ಪರಿಷತ್‌ನಿಂದ ದತ್ತಿ ನಿಧಿ ಉಪನ್ಯಾಸ, ಸಾಹಿತ್ಯ ಜಾಗೃತಿ ಕಾರ್ಯಕ್ರಮ