






ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆಯಾಗಿದ್ದಾರೆ.
ಸುಬ್ರಹ್ಮಣ್ಯ ಶಬರಾಯ ಅವರು ಈ ಹಿಂದೆ ಸಹ ಒಂದು ಬಾರಿ ಸದ್ರಿ ದೇವಸ್ಥಾನದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇದೀಗ ಅವರು 2ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ನೂತನ ಸಮಿತಿಗೆ ದೇವಸ್ಥಾನದ ಆಡಳಿತ ಅಧಿಕಾರಿಯಾಗಿದ್ದ ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರು ಮಾ.4ರಂದು ದೇವಸ್ಥಾನದಲ್ಲಿ ಅಧಿಕಾರ ಹಸ್ತಾಂತರಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಹರಿಶ್ಚಂದ್ರ ಉಪ್ಪಾರಪಳಿಕೆ ಕೊಕ್ಕಡ, ಸಿನಿ ತಂಡಶೇರಿ ಕೊಕ್ಕಡ, ಲೋಕೇಶ್ವರಿ ವಿನಯಚಂದ್ರ ವಳಂಬ್ರ ಕಡಿರುದ್ಯಾವರ, ಗಣೇಶ್ ಕಾಶಿಹೌಸ್ ಕೊಕ್ಕಡ, ವಿಶ್ವನಾಥ ಕೆ. ಕೊಲ್ಲಾಜೆ ಕೊಕ್ಕಡ, ಪ್ರಮೋದ್ ಕುಮಾರ್ ಶೆಟ್ಟಿ ರೆಖ್ಯ, ಪ್ರಶಾಂತ್ ಕುಮಾರ್ ಕೊಕ್ರಾಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ ಮಾರ್ಗದರ್ಶನ ನೀಡಿದರು.











