*ಮಾ.7 ಹೊರೆಕಾಣಿಕೆ ಸಮರ್ಪಣೆ, ಧಾರ್ಮಿಕ ಸಭೆ
*ಮಾ.8 ಆಶ್ಲೇಷ ಬಲಿ, ದರ್ಶನ ಬಲಿ, ನೇಮೋತ್ಸವ
*ಮಾ.9 ಕಲಶ ಆರಾಧನೆ, ಮಂತ್ರಾಕ್ಷತೆ
ಪುತ್ತೂರು: ಮುಂಡೂರು ಗ್ರಾಮದ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಶ್ರೀದೇವರ ವರ್ಷಾವಧಿ ಜಾತ್ರೋತ್ಸವ ಮತ್ತು ಕ್ಷೇತ್ರದ ದೈವಗಳ ನೇಮೋತ್ಸವವು ಮಾ.7ರಿಂದ ಪ್ರಾರಂಭಗೊಂಡು ಮಾ.9ರ ತನಕ ಕ್ಷೇತ್ರದ ತಂತ್ರಿಗಳಾದ ವೇ.ಮೂ. ಸುಬ್ರಹ್ಮಣ್ಯ ಬಳ್ಳಕ್ಕುರಾಯರವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಮಾ.7ರಂದು ಸಂಜೆ ಭಕ್ತಾದಿಗಳಿದ ಹೊರೆ ಕಾಣಿಕೆ ಸಮರ್ಪಣೆ, ದೇವರಿಗೆ ರಂಗಪೂಜೆಯ ಬಳಿಕ ನಡೆಯುವ ಧಾರ್ಮಿಕ ಸಭೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕಣ್ಣಾರಾಯ ಬನೇರಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ಮುಂಡೂರು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್.ಎಸ್.ಡಿ., ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಮೂಡಂಬೈಲು ಡಾ|ರವಿ ಶೆಟ್ಟಿ ನೇಸರ ಕಂಪ, ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಚೆಲ್ಯಡ್ಕ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂಡೂರು ಒಕ್ಕೂಟದ ಅಧ್ಯಕ್ಷೆ ಪುಷ್ಪಾವತಿ ರಾಜೇಶ್ ಅಂಬಟ, ಕುಕ್ಕಿನಡ್ಕ ಸುಬ್ರಾಯ ಭಜನಾ ಮಂಡಳಿ ಅಧ್ಯಕ್ಷ ಪದ್ಮನಾಭ ಗೌಡ ಗೌರವ ಉಪಸ್ಥಿತಿಯಿರಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಮುಂಡೂರು ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ವೃಭವ ನಡೆಯಲಿದೆ.
ಮಾ.8ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಗಣಪತಿಹೋಮ, ಕಲಶಪೂಜೆ, ಕಲಶಾಭಿಷೇಕ, ನಾಗಸನ್ನಿಧಿಯಲಿ ಆಶ್ಲೇಷಬಲಿ ಪೂಜೆ, ನಾಗ ತಂಬಿಲ, ದೈವಗಳಿಗೆ ತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ ದೈವಗಳ ಭಂಡಾರ ತೆಗೆಯುವುದು ನಂತರ ಶ್ರೀದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆಪೂಜೆ, ಬೆಡಿಮದ್ದು ಪ್ರದರ್ಶನ, ಶ್ರೀದೇವರ ದರ್ಶನ ಬಲಿ, ಬಟ್ಟಲುಕಾಣಿಕೆ, ಸಾರ್ವಜನಿಕ ಅನ್ನಸಂತರ್ಪಣೆ ನಂತರ ಕ್ಷೇತ್ರದ ದೈವಗಳಾದ ಉಳ್ಳಾಕುಲು, ವ್ಯಾಘ್ರಚಾಮುಂಡಿ, ರಕ್ತೇಶ್ವರಿ, ವರ್ಣಾರ ಪಂಜುರ್ಲಿ, ಬೊಟ್ಟಿಭೂತ ಹಾಗೂ ಗುಳಿಗ ದೈವಗಳ ನೇಮೋತ್ಸವ ನಡೆಯಲಿದೆ. ಮಾ.9ರಂದು ಕಲಶ ಆರಾಧನೆ, ಮಧ್ಯಾಹ್ನ ಮಂತ್ರಾಕ್ಷತೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಜಾತ್ರೋತ್ಸವ ಸಂಪನ್ನಗೊಳ್ಳಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕಣ್ಣಾರಾಯ ಬನೇರಿ ತಿಳಿಸಿದ್ಧಾರೆ.