ಪುತ್ತೂರು: ಪುತ್ತೂರು ತಾಲೂಕು ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಅಬ್ರಹಾಂ ಎಸ್.ಎ. ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಸಂಘದ ನಿರ್ದೇಶಕ ನಾಗೇಶ್ ಎಂ.ರವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು.
ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ ಹಾಗೂ ಕೋಶಾಧಿಕಾರಿ ಚಂದ್ರ ನಾಯ್ಕರವರು ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರನ್ನು ಅಭಿನಂದಿಸಿ ಗೌರವಿಸಿದರು. ಸಂಘದ ರಾಜ್ಯ ಪರಿಷತ್ ಸದಸ್ಯ ಮಹಮ್ಮದ್ ಅಶ್ರಫ್ ಕೆ. ಹಾಗೂ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.