ರಾಮಕುಂಜ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ದ.ಕ.ಜಿಲ್ಲಾ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರ ಮತ್ತು ಸಮ್ಮೇಳನದಲ್ಲಿ ಉತ್ತಮ ಸಾಧನೆಗಾಗಿ ಕಡಬ ತಾಲೂಕು ಹಳೆನೇರೆಂಕಿ ಸರಕಾರಿ ಉ.ಹಿ.ಪ್ರಾ.ಶಾಲಾ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕ ರಾಮಣ್ಣ ಗೌಡರನ್ನು ಸನ್ಮಾನಿಸಲಾಯಿತು. ಕಾರ್ಯಾಗಾರದಲ್ಲಿ ರಾಜ್ಯ, ಜಿಲ್ಲಾ, ತಾಲೂಕು ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.