ಪುತ್ತೂರು: ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪುತ್ತೂರು ಹಾಗೂ ಪಾಣಾಜೆ, ಬೆಟ್ಟಪಾಡಿ, ನಿಡ್ಪಳ್ಳಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸರಕಾರದ ಪಂಚಗ್ಯಾರಂಟಿ ಯೋಜನೆಗಳ ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಹಾಗೂ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಮಾ.11ರಂದು ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಬೆಳಿಗ್ಗೆ 10ರಿಂದ ನಡೆಯಲಿದೆ. ಪಾಣಾಜೆ, ಬೆಟ್ಟಂಪಾಡಿ ಹಾಗೂ ನಿಡ್ಪಳ್ಳಿ ಗ್ರಾಮಗಳು ಶಿಬಿರದಲ್ಲಿ ಒಳಪಡುತ್ತದೆ ಎಂದು ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಕಟಣೆ ತಿಳಿಸಿದೆ.