ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ದೀಪ ಪ್ರದಾನ ಕಾರ್ಯಕ್ರಮ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ದೀಪ ಪ್ರದಾನ ಕಾರ್ಯಕ್ರಮ ಮಾರ್ಚ್ 08ರಂದು ಇಂದ್ರಪ್ರಭಾ ಆಡಿಟೋರಿಯಂ ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿ ಡಾ, ನಂದೀಶ್ ವೈ ಡಿ, ಸಹಾಯಕ ಪ್ರಾಧ್ಯಾಪಕರು, ಸರಕಾರಿ ಪದವಿಪೂರ್ವ ಕಾಲೇಜು, ಉಪ್ಪಿನಂಗಡಿ ಇವರು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಅಸಾಧ್ಯವಾದದ್ದು ಯಾವುದು ಇಲ್ಲ, ಕಠಿಣ ಪರಿಶ್ರಮದ ಮೂಲಕ ಎಲ್ಲವನ್ನು ಸಾಧ್ಯವಾಗಿಸಿಕೊಳ್ಳಬಹುದು. ಜ್ಞಾನ ಎನ್ನುವುದು ಶಕ್ತಿ ಇದ್ದಂತೆ, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ನಿಮ್ಮ ಸಾಧನೆಯ ಮೂಲಕ ಗುರುವೃಂದದವರಿಗೆ ಗೌರವವನ್ನು ಸಲ್ಲಿಸಬೇಕು. ನಿಮಗೆ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಗುರಿಯನ್ನು ಸಾಧಿಸುವಂತೆ ಪ್ರೇರೆಪಿಸಿದರು.

ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ಭಟ್, ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್, ಸಹ ಶಿಕ್ಷಕಿ ಶಶಿಕಲಾ ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಜೀವನಕ್ಕೆ ಶುಭ ಹಾರೈಸಿದರು. 10ನೇ ತರಗತಿಯ ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ತಾವು ಕಳೆದ ಸವಿನೆನಪನ್ನು ಮೆಲುಕು ಹಾಕಿದರು.

ಈ ಸಂದರ್ಭದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ಜ್ಞಾನದ ಸಂಕೇತವಾದ ದೀಪವನ್ನು ಕಿರಿಯ ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಸಂಸ್ಥೆಯ ಘನತೆ ಗೌರವವನ್ನು ಹೆಚ್ಚಿಸುವ ಜವಾಬ್ದಾರಿಯನ್ನು ಹಸ್ತಾಂತರಿಸಿದರು. ಜೊತೆಗೆ ತಮ್ಮ ಸವಿನೆನಪಿಗಾಗಿ ಕೊಡುಗೆಗಳನ್ನು ಸಂಸ್ಥೆಗೆ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಸುಧಾಕರ್ ಶೆಟ್ಟಿ, ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. 9ನೇ ತರಗತಿಯ ವಿದ್ಯಾರ್ಥಿಗಳಾದ ಪಿ. ಸಂಜನ್ ರಾವ್ ಸ್ವಾಗತಿಸಿ, ಅಕ್ಷ ವಂದಿಸಿ, ಅನುಷ್ಕ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು.
ಅನ್ಮಯ್, ಸಿಂಚನಾ ಭಟ್ ಮತ್ತು ಆದ್ಯ ರಚಿಸಿ ರಾಗ ಸಂಯೋಜಿಸಿದ ಪದ್ಯವನ್ನು ತಮ್ಮ ಸಹಪಾಠಿಗಳೊಂದಿಗೆ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಮರ್ಪಿಸಿದರು.

LEAVE A REPLY

Please enter your comment!
Please enter your name here