ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ
ಕಾಣಿಯೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಕಾಣಿಯೂರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೊಬ್ಬೆಕೇರಿ ಇದರ ವತಿಯಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಾದ ಪುಣ್ಯಶ್ರೀ, ಆರಾಧ್ಯ, ಸಾನಿಧ್ಯ ಇವರಿಗೆ ತಂಬಾಕು ನಿಯಂತ್ರಣ ಮಂಡಳಿ ದ.ಕ. ಇವರು ಕೊಡಮಾಡಿದ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಣಿಯೂರು ಕ್ಲಸ್ಟರ್ ಸಿ ಆರ್ ಪಿ ಯಶೋದಾ ಎ, ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷ ಸುನೀತಾ ಗಣೇಶ್, ಉಪಾಧ್ಯಕ್ಷ ರಮೇಶ್ ಉಪ್ಪಡ್ಕ, ಶಾಲಾ ಮುಖ್ಯಗುರು ಶಶಿಕಲಾ, ಶಿಕ್ಷಕರಾದ ಜನಾರ್ದನ ಹೇಮಳ, ಶೋಭಿತಾ, ಗೀತಾ ಕುಮಾರಿ, ಸುರೇಖಾ, ಜಯಲತಾ, ಸುಶ್ಮಿತಾ, ಶೃತಿ, ದಿವ್ಯಾ ಮತ್ತು ಎಸ್ ಡಿ ಎಂ ಸಿ ಸದಸ್ಯರು ಉಪಸ್ಥಿತರಿದ್ದರು.