ಪುತ್ತೂರು: ಹಲವು ದಿನಗಳಿಂದ ನಾಪತ್ತೆಯಾಗಿದ್ದ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ಪದ್ಮನಾಭ ಮಡಿವಾಳ ಅವರ ಪುತ್ರ ದಿಗಂತ್ ಪತ್ತೆಯಾಗಿದ್ದಾನೆ.
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ದಿಗಂತ್ ಇದೀಗ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ. ಪಶ್ಚಿಮ ವಲಯ ಐಜಿ ಅಮಿತ್ ಸಿಂಗ್ ಮಾರ್ಗದರ್ಶನದಲ್ಲಿ, ಜಿಲ್ಲಾ ಎಸ್.ಪಿ ಯತೀಶ್ ನೇತೃತ್ವದಲ್ಲಿ ದಿಗಂತ್ ಪತ್ತೆಗಾಗಿ ಏಳು ತಂಡಗಳನ್ನು ಕಳೆದ ಎರಡು ದಿನಗಳಿಂದ ರಚಿಸಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದ ಪೊಲೀಸರು ಕೊನೆಗೂ ದಿಗಂತ್ ನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.