ಕಡಬ: ನೆಟ್ಟಣ ಸಮೀಪ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರರು ಗಾಯಗೊಂಡ ಘಟನೆ ಮಾ.8 ರಂದು ನಡೆದಿದೆ.
ಸುಬ್ರಹ್ಮಣ್ಯ ಕಡೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ಕಾರು ಮರ್ದಾಳ ಕಡೆಯಿಂದ ಸುಬ್ರಹ್ಮಣ್ಯ ಕಡೆಗೆ ಸಂಚರಿಸುತ್ತಿದ್ದ ಬೈಕ್ ಗೆ ಡಿಕ್ಕಿಯಾಗಿದ್ದು, ಹಾಸನ ಮೂಲದ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ಕಾರಿನವರು ಶಿವಮೊಗ್ಗದವರೆಂದು ತಿಳಿದು ಬಂದಿದೆ.