ಯುವ ಸಮಾಜ ಅಶಕ್ತ ಹೆಣ್ಣು ಮಕ್ಕಳ ಧ್ವನಿಯಾಗಬೇಕು: ಡಾ. ಅನಿಲಾ ದೀಪಕ್ ಶೆಟ್ಟಿ
ಪುತ್ತೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಮಹಿಳಾ ಘಟಕ ಹಾಗೂ Hindu Economics Forum Women’s Wing, ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಕಾನೂನು ಮಹಾವಿದ್ಯಾಲಯದ ಸುಜ್ಞಾನ ದೀಪಿಕಾ ಸಭಾಂಗಣದಲ್ಲಿ “ಮಹಿಳಾ ಸಬಲೀಕರಣ” ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ, ಜನ್ಮನ್ ಫಾರ್ಮಸಿಟಿಕಲ್ ಕಂಪನಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಡಾ. ಅನಿಲಾ ದೀಪಕ್ ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ನಂತರ ಮಹಿಳಾ ಸಬಲೀಕರಣ ಎನ್ನುವ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಒಬ್ಬ ಮಹಿಳೆ ಸುಂದರವಾದ ಜೀವನವನ್ನು ನಡೆಸಲು ಆಕೆಗೆ ನೀಡುವ ಎಲ್ಲಾ ತರಹದ ಅವಕಾಶ, ಮತ್ತು ಸಹಕಾರವೇ ನಿಜವಾದ ಮಹಿಳಾ ಸಬಲೀಕರಣ, ಯುವ ಸಮಾಜ ಅಶಕ್ತ ಹೆಣ್ಣು ಮಕ್ಕಳ ಧ್ವನಿಯಾಗಬೇಕು’ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀಮತಿ ಕೃಷ್ಣವೇಣಿ ಪ್ರಸಾದ್ ಮುಳಿಯ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯೂ ಧರ್ಮವಂತನಾಗಬೇಕು ನಮ್ಮ ಆಚಾರ ವಿಚಾರ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿದಾಗ ಮಾತ್ರ ಸುಂದರ ಜೀವನವನ್ನು ನಿರ್ವಹಿಸಲುಕ್ಕೆ ಸಾಧ್ಯವಾಗುತ್ತದೆ’ ಎಂದರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಮಹಾಲಕ್ಷ್ಮಿಯವರು ಮಾತನಾಡಿ, ‘ಮಹಿಳೆಯರ ಘನತೆ ಗೌರವಕ್ಕೆ ಧಕ್ಕೆ ಆಗುವಂತಹ ಪಾಶ್ಚ್ಯಾತ್ಯ ಸಂಸ್ಕೃತಿಯನ್ನು ತ್ಯಜಿಸಿ ಭಾರತೀಯ ಸನಾತನ ಸಂಸ್ಕೃತಿಯನ್ನು ಆರಾಧಿಸಬೇಕು’ ಎಂದು ಅಧ್ಯಕ್ಷೀಯ ನುಡಿಗಳನ್ನು ನುಡಿದರು. ವೇದಿಕೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಅಕ್ಷತಾ ಎ. ಪಿ, ಮಹಿಳಾ ಘಟಕದ ಸಂಯೋಜಕರುಗಳಾದ ಶ್ವೇತಾ ವಿಶ್ವೇಶ್ವರ ಹೆಗಡೆ ಹಾಗೂ ಆಶಿತಾ ಕೆ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸ್ಪೂರ್ತಿ ಸ್ವಾಗತಿಸಿ, ವಿದ್ಯಾರ್ಥಿನಿ ಅನನ್ಯ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ವೈಷ್ಣವಿ ನಿರ್ವಹಿಸಿದರು.