ನೆಲ್ಯಾಡಿ: ಜೆಸಿಐ ವತಿಯಿಂದ ಮಹಿಳಾ ದಿನಾಚರಣೆ

0

ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಲೀಲಾ ಅವರು ಮಾತನಾಡಿ, ಮಾನಸಿಕ ಒತ್ತಡದಿಂದ ಮಹಿಳೆಯರು ಯಾವ ರೀತಿ ಹೊರ ಬರಬಹುದು ಎಂಬ ಬಗ್ಗೆ ತಿಳಿಸಿದರು. ಮಹಿಳೆ ನಾಲ್ಕು ಗೋಡೆಯ ಮಧ್ಯೆ ಇರುವಂತವಳಾಗಬಾರದು. ಅವಳು ಸಹ ಮನೆಯಿಂದ ಹೊರಗಡೆ ಬಂದು ತನ್ನದೇ ಆದಂತಹ ಸ್ಥಾನಮಾನವನ್ನು ಗುರುತಿಸಿಕೊಂಡು ತನ್ನ ಇರುವಿಕೆಯನ್ನು ಜನರ ಗಮನಕ್ಕೆ ತರಬೇಕು ಎಂದು ತಿಳಿಸಿದರು. ನೆಲ್ಯಾಡಿ ಜೇಸಿಐ ಘಟಕದ ನಿಕಟಪೂರ್ವಾಧ್ಯಕ್ಷೆ ಸುಚಿತ್ರಾ ಬಂಟ್ರಿಯಾಲ್‌ರವರು ನಾಯಕತ್ವದ ಬಗ್ಗೆ ಅರಿವು ಮೂಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಮಹಿಳಾ ಜೇಸಿ ಅಧ್ಯಕ್ಷೆ ಪ್ರವೀಣಿ ಅವರು ಮಾತನಾಡಿ, ಮಹಿಳಾ ದಿನಾಚರಣೆಯ ಮಹತ್ವ ಮತ್ತು ಅದನ್ನು ಆಚರಿಸುವ ಉದ್ದೇಶದ ಬಗ್ಗೆ ತಿಳಿಸಿದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಪೂರ್ಣಿಮಾ, ಸ್ತ್ರೀಶಕ್ತಿ ಸಂಘದ ಅಧ್ಯಕ್ಷೆ ಜಯಂತಿ, ಜೆಸಿಐ ಕಾರ್ಯದರ್ಶಿ ನವ್ಯ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳಾ ಸಾಧಕಿಗೆ ಗೌರವಾರ್ಪಣೆ:
ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕಿಯನ್ನು ಸನ್ಮಾನಿಸಲಾಯಿತು. ಕೃಷಿಯಲ್ಲಿ ಅತೀಯಾದ ಒಲವನ್ನು ಹೊಂದಿ ಸಾಧನೆ ಮಾಡಿದ ಸುಂದರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವಸಂತಿ ಸ್ವಾಗತಿಸಿದರು. ಜೆಸಿಐ ಕಾರ್ಯದರ್ಶಿ ನವ್ಯಪ್ರಸಾದ್ ವಂದಿಸಿದರು. ಅಂಗನವಾಡಿ ಕಾರ್ಯಕರ್ತೆ ಸಂಪಾವತಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ನಿಟಕಪೂರ್ವ ಮಹಿಳಾ ಜೇಸಿ ಅಧ್ಯಕ್ಷೆ ಲೀಲಾ ಮೋಹನ್, ಜೆಸಿಐ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯವರು, ಸ್ತ್ರೀ ಶಕ್ತಿ ಸಂಘದ ಸದಸ್ಯರು, ವಿವಿಧ ಸಂಘ ಸಂಘಟನೆಗಳ ಸದಸ್ಯರು, ಅಂಗನವಾಡಿ ಪುಟಾಣಿಗಳು ಪಾಲ್ಗೊಂಡಿದ್ದರು. ನಂತರ ಮಹಿಳಾ ದಿನಾಚರಣೆಯ ಮಹತ್ವವನ್ನು ಅರಿವು ಮೂಡಿಸುವ ಕುರಿತಾಗಿ ಮೆರವಣಿಗೆಯನ್ನು ಮಾಡಲಾಯಿತು. ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

LEAVE A REPLY

Please enter your comment!
Please enter your name here