ನೆಲ್ಯಾಡಿ: ಸೂರ್ಯನಗರ ಶ್ರೀರಾಮ ವಿದ್ಯಾಲಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ದೀಪ ಪ್ರದಾನ ಕಾರ್ಯಕ್ರಮ ಮಾ.8ರಂದು ನಡೆಯಿತು.
10ನೇ ತರಗತಿ ವಿದ್ಯಾರ್ಥಿಗಳು ತಮ್ಮ ಕಿರಿಯ ವಿದ್ಯಾರ್ಥಿಗಳಾದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ದೀಪಗಳನ್ನು ಹಸ್ತಾಂತರಿಸಿದರು. ಮುಖ್ಯ ಅತಿಥಿಯಾಗಿದ್ದ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ಶಿವಪ್ರಸಾದ್ ಉಜಿರೆ, ಮೃದಂಗ ವಾದಕ ವಸಂತಕೃಷ್ಣ ಕಾಂಚನ, ಆಡಳಿತ ಮಂಡಳಿ ಸದಸ್ಯ ಸುಬ್ರಾಯ ಪುಣಚ ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು. ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿ ಮೂಲಚಂದ್ರ ಕಾಂಚನ ಅಧ್ಯಕ್ಷತೆ ವಹಿಸಿದ್ದರು.
ಹತ್ತನೇ ತರಗತಿಯ ವಿದ್ಯಾರ್ಥಿಗಳು ತಾವು ಶಾಲೆಯಲ್ಲಿ ಕಳೆದಂತಹ ಸುಂದರ ಕ್ಷಣಗಳನ್ನು ಹಂಚಿಕೊಂಡು ಅನಿಸಿಕೆ ವ್ಯಕ್ತಪಡಿಸಿದರು. ವಿದ್ಯಾರ್ಥಿ ಹರ್ಷವರ್ಧನ್ ಪ್ರೇರಣಾ ಗೀತೆ ಹಾಡಿದರು. ಶಾಲಾ ಶಿಕ್ಷಕಿ ಸೂರ್ಯ ಶುಭ ಹಾರೈಸಿದರು. ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ಶುಭ ಹಾರೈಸಿದರು. ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಹಾಗೂ ಪೋಷಕರು, ಶಾಲೆಯ ಶಿಕ್ಷಕರು ಹಾಜರಿದ್ದರು. ಭಾಗೀರಥಿ ಮಾತಾಜಿ ಸ್ವಾಗತಿಸಿದರು. ಶಾಲಾ ಮುಖ್ಯಗುರು ಗಣೇಶ್ ವಾಗ್ಲೆ ವಂದಿಸಿದರು. ಕಾವ್ಯ ಮಾತಾಜಿ ನಿರೂಪಿಸಿದರು.
