ಪುತ್ತೂರು ಜಾತ್ರೆ – ಸಾಂಸ್ಕೃತಿಕ ಕಾರ್ಯಕ್ರಮ ನೋಂದಾವಣೆಗೆ ಅರ್ಜಿ ಆಹ್ವಾನ

0

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಸಂದರ್ಭ ಎ.10 ರಿಂದ 20ರ ತನಕ ನಡೆಯುವ ವಿವಿಧ ಕಾರ್ಯಕ್ರಮದಲ್ಲಿ ಸೇವಾ ರೂಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವವರು ಮಾ.20ರ ಒಳಗೆ ದೇವಳದ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸುವಂತೆ ತಿಳಿಸಲಾಗಿದೆ.

ದೇವಳದ ವತಿಯಿಂದ ದೇವಳದ ಗದ್ದೆಯಲ್ಲಿ ಎ.17ರ ಬ್ರಹ್ಮರಥೋತ್ಸವದ ಸಂದರ್ಭ ಬಿಟ್ಟು ಉಳಿದ ದಿನ ಎ.10 ರಿಂದ 20ರ ತನಕ ಪ್ರತಿ ದಿನ ಸಂಜೆಯಿಂದ ರಾತ್ರಿಯ ತನಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ದೇವಳದ ವತಿಯಿಂದ ನಡೆಯಲಿದೆ. ಸೇವಾ ರೂಪದಲ್ಲಿ ಕಾರ್ಯಕ್ರಮ ನೀಡುವವರು ದೇವಳದ ಕಚೇರಿಯ ಸಮಯದಲ್ಲಿ ನೋಂದಾಯಿಸುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here