ಪುತ್ತೂರು: ಕರ್ನಾಟಕ ಗ್ರಾಮ ಸ್ವರಾಜ್ ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 3ರಂತೆ ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಪಂಚಾಯತ್‌ನ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಮಾ.12ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ಕುಂಬ್ರ ನವೋದಯ ರೈತ ಸಭಾಭವನದಲ್ಲಿ ನಡೆಯಲಿದೆ.
ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿಯವರು ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ನಡೆಸಿಕೊಡಲಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಮತದಾರರು ಗ್ರಾಮ ಸಭೆಗಳಲ್ಲಿ ಭಾಗವಹಿಸಿ ಗ್ರಾಮದ ಅಭಿವೃದ್ಧಿಗೆ ಸೂಕ್ತ ಸಲಹೆಗಳನ್ನು ನೀಡಿ ಸಹಕರಿಸುವಂತೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷ ಅಶ್ರಫ್ ಉಜಿರೋಡಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಅವಿನಾಶ್ ಬಿ.ಆರ್, ಕಾರ್ಯದರ್ಶಿ ಜಯಂತಿ ಕೆ ಹಾಗೂ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.