ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಮಾರ್ಚ್ ತಿಂಗಳ ಗೌರವ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಪುರಸ್ಕಾರವನ್ನು ಕೊಲ್ಯೊಟ್ಟು ಅಂಗನವಾಡಿ ಕಾರ್ಯಕರ್ತೆ ಸಂಪಾವತಿ ಅವರಿಗೆ ನೀಡಿ ಗೌರವಿಸಲಾಯಿತು.
ಸಂಪಾವತಿ ಅವರು ಕಳೆದ 28 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ವಿವಿಧ ಸಂಘ ಸಂಸ್ಥೆಗಳಲ್ಲಿ ತೊಡಗಿದ್ದಾರೆ. ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘದ ನಿರ್ದೇಶಕಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸಮಾಜಮುಖಿ ಸೇವೆಯನ್ನು ಗುರುತಿಸಿ ಈ ಪುರಸ್ಕಾರ ನೀಡಿ ಗೌರವಿಸಲಾಯಿತು.
ನೆಲ್ಯಾಡಿ ಜೇಸಿಐ ನಿಕಟಪೂರ್ವ ಅಧ್ಯಕ್ಷೆ ಸುಚಿತ್ರ ಬಂಟ್ರಿಯಲ್, ಮಹಿಳಾ ಜೆಸಿ ಅಧ್ಯಕ್ಷೆ ಪ್ರವೀಣಿ ಸುಧಾಕರ್ ಶೆಟ್ಟಿ, ಕಾರ್ಯದರ್ಶಿ ನವ್ಯಾಪ್ರಸಾದ್, ಸದಸ್ಯರಾದ ಸುರಕ್ಷಿತಾ ಶೆಟ್ಟಿ, ಜೊತೆ ಕಾರ್ಯದರ್ಶಿ ಲೀಲಾಮೋಹನ್, ನೆಲ್ಯಾಡಿ ಪ್ರಾಥಮಿಕ ಆರೋಗ್ಯಕೇಂದ್ರದ ಆರೋಗ್ಯ ಸುರಕ್ಷತಾಧಿಕಾರಿ ಲೀಲಾ ಮತ್ತಿತರರು ಉಪಸ್ಥಿತರಿದ್ದರು.