ಆಲಂಕಾರು: ಸೀಮಾ ದೇವಸ್ಥಾನ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಮಾ.14ರಿಂದ 24ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ
ಮಾ.14ರಂದು ಬೆಳಿಗ್ಗೆ 8ರಿಂದ ಸ್ವಸ್ತಿ ಪುಣ್ಯಾಹ ವಾಚನ, ನವಕ ಪ್ರಧಾನ, ಗಣಹೋಮ, ಕಲಶಾಭಿಷೇಕ, ಗೊನೆ ಮುಹೂರ್ತ, ಮಹಾಪೂಜೆ, ಅನ್ನಸಂತರ್ಪಣೆ ನಡೆದು, ರಾತ್ರಿ 7ಕ್ಕೆ ಧ್ವಜಾರೋಹಣ, ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಮಾ.15ರಂದು ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ ನಡೆದು, ರಾತ್ರಿ 7ರಿಂದ ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ ನಡೆಯಲಿದೆ.
ಮಾ.16ರಂದು ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಸಂಜೆ 5ರಿಂದ ದೈವಗಳ ಭಂಡಾರ ತೆಗೆಯುವುದು, ರಾತ್ರಿ 7ರಿಂದ ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಅರಸು ಉಳ್ಳಾಯ, ಮಹಿಷಂತಾಯ ಮತ್ತು ರಕ್ತೇಶ್ವರಿ ದೈವಗಳ ನೇಮೋತ್ಸವ ನಡೆಯಲಿದೆ.
ಮಾ. 17ರಂದು ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಸಂಜೆ 5ರಿಂದ ದೈವಗಳ ಭಂಡಾರ ತೆಗೆಯುವುದು, ಸಂಜೆ 6ರಿಂದ ಉಗ್ರಾಣ ಮುಹೂರ್ತ, ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ ಧೂಮಾವತಿ, ಬಂಟ ಮತ್ತು ಕೊಡಮಣಿತ್ತಾಯ ದೈವಗಳ ನರ್ತನೋತ್ಸವ ನಡೆಯಲಿದೆ.
ಮಾ. 18ರಂದು ಬೆಳಿಗ್ಗೆ ಬಲಿ ಹೊರಟು ಉತ್ಸವ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಸಂಜೆ 6.30ರಿಂದ ಬಲಿ ಹೊರಟು ಉತ್ಸವ, ವಸಂತ ಕಟ್ಟೆಪೂಜೆ, ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ ನಡೆಯಲಿದೆ.
ಮಾ. 19ರಂದು ಬೆಳಿಗ್ಗೆ ಬಲಿ ಹೊರಟು ಉತ್ಸವ, ಮಧ್ಯಾಹ್ನ 12ರಿಂದ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಸಂಜೆ 4.30ರಿಂದ ಬಲಿ ಹೊರಟು ಉತ್ಸವ, ಆಲಂಕಾರು ಪೇಟೆ ಸವಾರಿ, ಆಲಂಕಾರು ಸಾರ್ವಜನಿಕ ಕಟ್ಟೆಪೂಜೆಗಳು, ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ ನಡೆಯಲಿದೆ
ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ರಾತ್ರಿ 7ರಿಂದ ಆಲಂಕಾರು ಪೇಟೆಯಲ್ಲಿ ಪುತ್ತೂರು ಬಲ್ನಾಡು ಸಂಸಾರ ಕಲಾವಿದೆರ್ ಇವರಿಂದ ನಂಬಿಕೆದಾಯೆ ಭಕ್ತಿಪ್ರಧಾನ ಹಾಸ್ಯ ಸಾಮಾಜಿಕ ನಾಟಕ ಪ್ರದರ್ಶನಗೊಳ್ಳಲಿದೆ. ದೇವರ ಸವಾರಿ ಉತ್ಸವದ ಜೊತೆಯಲ್ಲಿ ಶ್ರೀ ದುರ್ಗಾಂಬಾ ಅಲಂಕಾರ ಸಮಿತಿ ಹಾಗೂ ಶ್ರೀ ಕ್ಷೇತ್ರ ಶರವೂರು ಇವರ ಸಂಯೋಜನೆಯಲ್ಲಿ ಚಲನಚಿತ್ರ ಖ್ಯಾತಿಯ ರಾಜ್ಯ ಪ್ರಶಸ್ತಿ ವಿಜೇತ ಶೆಟ್ಟಿ ಆರ್ಟ್ಸ್ ಬಳಗದ ಗಿರಿಧರ ಶೆಟ್ಟಿ ಬೆಳ್ತಂಗಡಿ ಇವರಿಂದ ಕೀಲು ಕುದುರೆ, ಅರಸು ನಾಟ್ಯ ಹಾಗೂ ಯಕ್ಷಗಾನ ಶೈಲಿಯ ಗಜಗಾತ್ರದ ಆಕರ್ಷಕ ಗೊಂಬೆಗಳ ಪ್ರದರ್ಶನ ನಡೆಯಲಿದೆ.
ಮಾ. 20ರಂದು ಬೆಳಿಗ್ಗೆ ಬಲಿ ಹೊರಟು ಉತ್ಸವ, ಮಧ್ಯಾಹ್ನ 12ರಿಂದ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಸಂಜೆ 6.30ರಿಂದ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ ನಡೆಯಲಿದೆ.
ಮಾ. 21ರಂದು ಬೆಳಿಗ್ಗೆ 8.30ಕ್ಕೆ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಮಹಾಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30ರಿಂದ ಸವಾರಿ ಮಂಟಪ ಕಟ್ಟೆಪೂಜೆಗಳು, ಕೆರೆ ಉತ್ಸವ, ಉತ್ಸವ, ವಸಂತ ಕಟ್ಟೆಪೂಜೆ, ಮಹಾಪೂಜೆ, ಭೂತಬಲಿ, ಪ್ರಸಾದ ವಿತರಣೆ ಜರಗಲಿದೆ.
ಮಾ. 22ರಂದು ಬೆಳಿಗ್ಗೆ ಬಲಿ ಹೊರಟು ಉತ್ಸವ, ಆಶ್ಲೇಷ ಬಲಿ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ ಹಾಗೂ ರಾತ್ರಿ 9ರಿಂದ ಶ್ರೀ ಮಹಾರಥೋತ್ಸವ, ಉತ್ಸವ, ವಸಂತಕಟ್ಟೆಪೂಜೆ, ಶ್ರೀ ಭೂತಬಲಿ, ಕವಾಟ ಬಂಧನ ನಡೆಯಲಿದೆ.
ರಾತ್ರಿ 7ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ರಾತ್ರಿ 10ರಿಂದ ಶ್ರೀ ಕ್ಷೇತ್ರದ ರಥಬೀದಿಯಲ್ಲಿ ಮಂಗಳೂರು ಶ್ರೀ ಲಲಿತೆ ಕಲಾವಿದರ್ ಇವರಿಂದ ಶನಿ ಮಹಾತ್ಮೆ ಪೌರಾಣಿಕ ನಾಟಕ ಪ್ರದರ್ಶನಗೊಳ್ಳಲಿದೆ.
ಮಾ. 23ರಂದು ಬೆಳಿಗ್ಗೆ 8ರಿಂದ ಕವಾಟೋದ್ಘಾಟನೆ, ಪ್ರಸನ್ನ ಪೂಜೆ, ಶಯನ ಪ್ರಸಾದ ವಿತರಣೆ, 10ರಿಂದ ಯಾತ್ರಾ ಹೋಮ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅಪರಾಹ್ನ 3:30 ರಿಂದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಇವರ ಪ್ರಾಯೋಜಕತ್ವದಲ್ಲಿ ಸೌಪರ್ಣಿಕ ಮ್ಯೂಸಿಕಲ್ ಕಡಬ ಇವರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ನಡೆದು
ಸಂಜೆ 5ರಿಂದ ಅವಭೃ ತ ಮೆರವಣಿಗೆ, ಕಟ್ಟೆಪೂಜೆಗಳು, ಸನತಮೊಗರು ಕುಮಾರಧಾರೆಯಲ್ಲಿ ಅವಭೃತ, ಬಳಿಕ ಧ್ವಜಾವರೋಹಣ ನಡೆಯಲಿದೆ.
ಮಾ. 24ರಂದು ಬೆಳಿಗ್ಗೆ 9ರಿಂದ ಶರವೂರು ಸುಬ್ರಹ್ಮಣ್ಯ ರಾವ್ ಮತ್ತು ಮನೆಯವರಿಂದ ಭದ್ರಕಾಳಿ ಅಮ್ಮನವರ ಗುಡಿಯಲ್ಲಿ ವಿಶೇಷ ಪೂಜೆ, ಶಿರಾಡಿ ಮತ್ತು ಗುಳಿಗ ದೈವಗಳ ನೇಮ ನಡೆಯಲಿದೆ. ಮಧ್ಯಾಹ್ನ ಶರವೂರು, ರಾಮಕುಂಜ ಹಾಗೂ ಆಲಂಕಾರು ಅಯ್ಯಪ್ಪ ಭಕ್ತವೃಂದದಿಂದ ಗಂಜಿ ಊಟ ಸೇವೆ ನಡೆಯಲಿದೆ ಜಾತ್ರೋತ್ಸವ ಸಂಧರ್ಭದಲ್ಲಿ ಹೊರೆಕಾಣಿಕೆ ನಡೆಯಲಿದೆ ಎಂದು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ.ಸುಬ್ರಹ್ಮಣ್ಯ ರಾವ್ ಮತ್ತು ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಕೆ.ಹರಿಪ್ರಸಾದ ಉಪಾಧ್ಯಾಯ,ರಾಧಾಕೃಷ್ಣ ರೈ ಪರಾರಿಗುತ್ತು, ಸೇಸಪ್ಪ ಪೂಜಾರಿ ನೆಕ್ಕಿಲಾಡಿ, ವಿಠಲ ರೈ ಪೆರಾಬೆ,ಪಟ್ಟೆ,ಮೋಹನ ಶರವೂರು, ಪುಷ್ಪಾಲತಾ.ಕೆ,ರೋಹಿಣಿ ಬಿ.ಯನ್,ವಾಸಪ್ಪ ಗೌಡ ಕೆದ್ದೊಟ್ಟೆ,ಗೌರವ ಸದಸ್ಯರಾದ ದಾಮೋದರ ಗೌಡ ಶರವೂರು, ಪ್ರಮುಖರಾದ ಹರೀಶ ಆಚಾರ್ಯ ನಗ್ರಿಗುತ್ತು ,ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹೇಮಂತ್ ರೈ ಮನವಳಿಕೆ ಗುತ್ತು ಮತ್ತು ಸದಸ್ಯರು ಹಾಗು ಆದಿಶಕ್ತಿ ಭಜನಾ ಮಂಡಳಿ ,ಶ್ರೀ ದುರ್ಗಾಂಬಾ ಕಲಾಸಂಗಮ,ಶ್ರೀ ದುರ್ಗಾಂಬಾ ಆಲಂಕಾರ ಸಮಿತಿ, ಸ್ವಯಂ ಸೇವಾ ಸಮಿತಿಯ ಅಧ್ಯಕ್ಷರು,ಪದಾಧಿಕಾರಿಗಳು, ಸದಸ್ಯರು, ಆರ್ಚಕರು, ಸಿಬ್ಬಂದಿವರ್ಗದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.