ನಾಳೆ(ಮಾ.14) ಪೆರ್ಲಂಪಾಡಿ ಉದಯಗಿರಿಯಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

0

ಊರ ಜಾತ್ರೆ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ, ಸಾಂಸ್ಕೃತಿಕ ಕಾರ್ಯಕ್ರಮ

ಪುತ್ತೂರು: ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಉದಯಗಿರಿಯಲ್ಲಿ ನಡೆಯುವ ಊರ ಜಾತ್ರೆ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.14ರಂದು ಜರಗಲಿದೆ. ಬೆಳಿಗ್ಗೆ ಗಣಹೋಮ, ಕಲಶ ಪ್ರತಿಷ್ಠೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಸಂಜೆ ಬಾಯಂಬಾಡಿ ಮಣ್ಣಾಪು ಶ್ರೀ ವಿಷ್ಣುಮೂರ್ತಿ ದೈವಸ್ಥಾನದಿಂದ ಭಂಡಾರವು ಸಿಆರ್.ಸಿ ಕಾಲೋನಿಯ ಶ್ರೀ ಮುತ್ತುಮಾರಿಯಮ್ಮ ದೇವಸ್ಥಾನಕ್ಕೆ ಬಂದು ಅಲ್ಲಿಂದ ದರುಶನದಿಂದ ಉದಯಗಿರಿಗೆ ತೆರಳುವ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಮೇಲೇರಿಗೆ ಅಗ್ನಿಸ್ಪರ್ಶ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 11 ಕ್ಕೆ ಕುಳಿಚಟ್ಟು ದೈವದ ನರ್ತನ ಸೇವೆ ನಡೆಯಲಿದೆ. ಮಾ.15 ರ ಪ್ರಾತಃಕಾಲ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ, ಮಾರಿ ಕಲಕ್ಕೆ ಹೋಗುವುದು ನಡೆದು ಪ್ರಸಾದ ವಿತರಣೆ ಬಳಿಕ ಗುಳಿಗ ದೈವದ ನೇಮ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಮಾ.14 ರಂದು ಸಂಜೆ 6.30 ರಿಂದ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ. ರಾತ್ರಿ 12.30ರಿಂದ ಸರಸ್ವತಿ ಕಲಾ ಡ್ಯಾನ್ಸ್ ಸ್ಟುಡಿಯೋ ನೇರಳಕಟ್ಟೆ ಪಡುಬಿದ್ರೆ ಮತ್ತು ಜನ್ಯ ಡ್ಯಾನ್ಸ್ ಅಕಾಡೆಮಿ ಮುರ ಪುತ್ತೂರು ಇವರಿಂದ ನೃತ್ಯ ವೈವಿಧ್ಯ ಹಾಗೇ ‘ಕುಸಲ್ದ ಮಸಾಲೆ’ ಸಂಗೀತ ರಸಸಂಜೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಡಳಿತ ಸಮಿತಿಯ ಅಧ್ಯಕ್ಷ ತಾರಾಪ್ರಸಾದ್ ರಾಮಕಜೆ, ಪ್ರ.ಕಾರ್ಯದರ್ಶಿ ಗಿರೀಶ್ ಪಾದೆಕಲ್ಲು, ಜೀರ್ಣೋದ್ಧಾರ ಸಮಿತಿ ಗೌರವ ಅಧ್ಯಕ್ಷ ಗಿರೀಶ್ ಮಳಿ ಹಾಗೂ ಸರ್ವ ಸದಸ್ಯರು ಮತ್ತು ಊರಿನ ಸಮಸ್ತರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here