ಪುತ್ತೂರು: ಕಾರ್ಕಳ ಪುರಸಭೆಯ ಮುಖ್ಯಾಧಿಕಾರಿಯಾಗಿ ಲೀನಾ ಬ್ರಿಟ್ಟೋ ಮಾ.13ರಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಮುಖ್ಯಾಧಿಕಾರಿಯಾಗಿದ್ದ ರೂಪ ಶೆಟ್ಟಿ ಅವರನ್ನು ಮೂಡಬಿದ್ರೆ ಪುರಸಭೆಗೆ ವರ್ಗಾವಣೆಗೊಳಿಸಲಾಗಿದ್ದು ಅವರಿಂದ ತೆರವಾದ ಸ್ಥಾನಕ್ಕೆ ಲೀನಾ ಬ್ರಿಟ್ಟೋ ಅವರನ್ನು ನೇಮಕ ಮಾಡಲಾಗಿದೆ.
ಪುತ್ತೂರು ಸಾಮೆತ್ತಡ್ಕ ನಿವಾಸಿಯಾಗಿದ್ದು ಪ್ರಸ್ತುತ ಬಂಟ್ವಾಳದಲ್ಲಿ ವಾಸವಾಗಿರುವ ಲೀನಾ ಬ್ರಿಟ್ಟೋ ಅವರು ಕ್ರಮವಾಗಿ ಶಿರಸಿ ನಗರಸಭೆ, ಪುತ್ತೂರು ಪುರಸಭೆ, ಸುಳ್ಯ ನಗರ ಪಂಚಾಯತ್, ಪುತ್ತೂರು ಪುರಸಭೆ, ಮೂಡಬಿದ್ರೆ ಪುರಸಭೆ, ಹೊನ್ನಾವರ ಪಟ್ಟಣ ಪಂಚಾಯತ್, ಮೂಡಿಗೆರೆ ಪಟ್ಟಣ ಪಂಚಾಯತ್, ಬಂಟ್ವಾಳ ಪುರಸಭೆ, ವಿಟ್ಲ ಪಟ್ಟಣ ಪಂಚಾಯತ್, ಬೇಲೂರು ಪುರಸಭೆ, ಪುತ್ತೂರು ನಗರಸಭೆ, ಬಂಟ್ವಾಳ ಪುರಸಭೆ, ಮುಳಬಾಗಿಲು ಪುರಸಭೆ, ಮಂಗಳೂರು ಮಹಾನಗರ ಪಾಲಿಕೆ ಮತ್ತು ಬಂಟ್ವಾಳ ಪುರಸಭೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇದೀಗ ಕಾರ್ಕಳ ಪುರಸಭೆಗೆ ವರ್ಗಾವಣೆಯಾಗಿದ್ದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.