ನಂದಿ ರಥಯಾತ್ರೆ ಯಶಸ್ಸಿಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

0

ಪುತ್ತೂರು: ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ನಂದಿ ರಥಯಾತ್ರೆ ಸಂಚಾಲನ ಸಮಿತಿ ಪುತ್ತೂರು ಇದರ ವತಿಯಿಂದ ಮಾ.16ರಂದು ಪುತ್ತೂರಿಗೆ ಆಗಮಿಸುವ ನಂದಿ ರಥ ಯಾತ್ರೆಯ ಕಾಯಕ್ರಮದ ಯಶಸ್ಸಿಗಾಗಿ ಮಾ.14ರಂದು ರಥಯಾತ್ರೆ ಸಮಿತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲಾಯಿತು.

ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ವೇ.ಮೂ. ವಸಂತ ಕೆದಿಲಾಯ ಅವರು ಪ್ರಾರ್ಥನೆ ನಡೆಯಿತು. ರಥಯಾತ್ರೆಯ ಸಂಚಲನಾ ಸಮಿತಿ ಅಧ್ಯಕ್ಷ ಡಾ. ಕೃಷ್ಣಪ್ರಸನ್ನ, ಗೋಸೇವಾ ಗತಿವಿಧಿ ಕರ್ನಾಟಕ ಸಮಿತಿಯ ಪ್ರಕಾಶ್ಚಂದ್ರ ರೈ ಕೈಕಾರ, ನಂದಿ ರಥಯಾತ್ರೆ ಸಂಚಾಲನ ಸಮಿತಿ ಪುತ್ತೂರು ಇದರ ಕಾರ್ಯದರ್ಶಿ ದಿನೇಶ್ ಪಂಜಿಗ, ಕೋಶಾಧಿಕಾರಿ ಪ್ರಸನ್ನ ಮಾರ್ತ, ವಿಜಯಲಕ್ಷ್ಮೀ ಶಗ್ರಿತ್ತಾಯ, ದಾಮೋದರ ಪಾಟಾಳಿ, ಶಿವಕುಮಾರ್ ಕಲ್ಲಿಮಾರ್, ಸಂತೋಷ್ ಕೈಕಾರ, ಸಂತೋಷ್ ಬೋನಂತಾಯ, ನಾಗೇಂದ್ರ ಬಾಳಿಗ, ಶಶಿಧರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here