ಪುತ್ತೂರು: ಪುತ್ತೂರು ತಾಲೂಕು ಕಚೇರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಇಂದು(ಮಾ.15) ದಿಢೀರ್ ಭೇಟಿ ನೀಡಿದರು.
ತಾಲೂಕು ಕಚೇರಿಯ ಸಿಬ್ಬಂದಿಗಳು, ಅಧಿಕಾರಿಗಳು ತಡವಾಗಿ ಕಚೇರಿಗೆ ಬರುತ್ತಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆ ಶಾಸಕ ಅಶೋಕ್ ರೈ ಅವರು ದಿಢೀರ್ ಆಗಿ ತಾಲೂಕು ಕಚೇರಿಗೆ ಭೇಟಿ ನೀಡಿದರು.
ರಜೆ ಪಡೆಯದೇ ಗೈರುಹಾಜರಾದವರಿಗೆ ಶೋಕಾಸ್ ನೋಟಿಸ್ ನೀಡುವಂತೆ ಶಾಸಕರು ಸೂಚನೆ ನೀಡಿದರು. ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬಂದು ಕರ್ತವ್ಯ ನಿರ್ವಹಿಸಬೇಕು. ಸಮಯಕ್ಕೆ ಸರಿಯಾಗಿ ಬಾರದೇ ಇದ್ದರೆ ಕ್ರಮಕೈಗೊಳ್ಳಲಾಗುವುದು ಎಂದು ಶಾಸಕರು ಹೇಳಿದರು.